ಕುರ್ತಕೋಟಿಯಲ್ಲಿ ರಾಜ್ಯದಲ್ಲೇ ಮಾದರಿ ಗ್ರಾಪಂ ಕಟ್ಟಡ : ಸಚಿವರು
ಗದಗ, 17 ಜನವರಿ (ಹಿ.ಸ.) : ಆ್ಯಂಕರ್ : ಗದಗ ತಾಲೂಕಿನ ಮುಳುಗುಂದ ಸಮೀಪದ ಕುರ್ತಕೋಟಿ ಗ್ರಾಮದಲ್ಲಿ ಅಂದಾಜು ₹1 ಕೋಟಿ 70 ಲಕ್ಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿಯನ್ನು ಕಾನೂನು ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ ಡಾ. ಎಚ್.ಕೆ. ಪಾಟೀಲ ಅವರ
ಫೋಟೋ


ಗದಗ, 17 ಜನವರಿ (ಹಿ.ಸ.) :

ಆ್ಯಂಕರ್ : ಗದಗ ತಾಲೂಕಿನ ಮುಳುಗುಂದ ಸಮೀಪದ ಕುರ್ತಕೋಟಿ ಗ್ರಾಮದಲ್ಲಿ ಅಂದಾಜು ₹1 ಕೋಟಿ 70 ಲಕ್ಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿಯನ್ನು ಕಾನೂನು ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವರಾದ ಡಾ. ಎಚ್.ಕೆ. ಪಾಟೀಲ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಹಾಜರಿದ್ದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯಿಂದ ಕಾಮಗಾರಿಯ ಪ್ರಗತಿ ಕುರಿತು ವಿವರಗಳನ್ನು ಪಡೆದುಕೊಂಡ ಸಚಿವರು, ಗ್ರಾಮದ ಆಡಳಿತದ ಕೇಂದ್ರವಾಗಿರುವ ಈ ಗ್ರಾಪಂ ಕಟ್ಟಡವು ರಾಜ್ಯದಲ್ಲಿಯೇ ಮಾದರಿಯಾಗುವ ರೀತಿಯಲ್ಲಿ ನಿರ್ಮಾಣವಾಗಬೇಕು. ಮಾರ್ಚ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆಗೆ ಸಿದ್ಧಪಡಿಸುವಂತೆ ಸ್ಪಷ್ಟ ಸೂಚನೆ ನೀಡಿದರು.

ಕುರ್ತಕೋಟಿ ಗ್ರಾಮವು ಅಭಿವೃದ್ಧಿ ವಿಚಾರದಲ್ಲಿ ಪ್ರಾಮಾಣಿಕತೆಗೆ ಹೆಸರುವಾಸಿಯಾಗಿದ್ದು, ಇಲ್ಲಿ ಕೈಗೊಳ್ಳಲಾಗಿರುವ ಪ್ರತಿಯೊಂದು ಅಭಿವೃದ್ಧಿ ಕಾರ್ಯವೂ ಮಾದರಿಯಾಗಿವೆ. ಜನೋಪಯೋಗಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ನಡೆಯುತ್ತಿರುವ ಈ ಕೆಲಸಗಳು ಶ್ಲಾಘನೀಯವಾಗಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕುರ್ತಕೋಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಪ್ಪಣ್ಣ ಇನಾಮತಿ, ರವಿ ಮೂಲಿಮನಿ, ಗಿರೀಶ ಡವಾಲಿ, ಭಕ್ಷಿಸಾಬ ತಹಶೀಲ್ದಾರ, ಶೇಖರಯ್ಯ ಹೊಸಮಠ, ಶಿವಣ್ಣ ಗಾಡರಡ್ಡಿ, ಜಿ.ಎನ್. ಪಾಟೀಲ, ಮಲ್ಲಪ್ಪ ಇನಾಮತಿ, ರಾಜೇಸಾಬ ತಹಶೀಲ್ದಾರ, ಶೇಖಪ್ಪ ಈಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಗ್ರಾಮಾಂತರ ಪ್ರದೇಶಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೆಗಾ)ಯಡಿ ಜನರಿಗೆ ನೇರವಾಗಿ ಉಪಯುಕ್ತವಾಗುವ ಅನೇಕ ಆಸ್ತಿಗಳನ್ನು ಸೃಷ್ಟಿಸಲಾಗಿದೆ. ಅಂಗನವಾಡಿ ಕಟ್ಟಡ, ಗ್ರಂಥಾಲಯ, ಶಾಲಾ ಮೈದಾನ, ಕೆರೆ ನಿರ್ಮಾಣ, ರೈತರಿಗೆ ಅಗತ್ಯವಾದ ಬದು, ಕೃಷಿ ಹೊಂಡಗಳ ನಿರ್ಮಾಣ, ಸಸಿ ನೆಡುವಿಕೆ, ಗ್ರಾಮ ಸ್ವಚ್ಛತೆ, ಚರಂಡಿ ನಿರ್ಮಾಣ ಸೇರಿದಂತೆ ಹತ್ತು ಹಲವು ಅಭಿವೃದ್ಧಿ ಕಾರ್ಯಗಳು ಈ ಯೋಜನೆಯಡಿ ಜಾರಿಯಾಗಿದ್ದು ಜನರಿಗೆ ಆಸರೆಯಾಗಿವೆ.

ಇಂತಹ ಜನಪರ ಯೋಜನೆಗಳನ್ನು ತಡೆದು ರೈತಪರ ಯೋಜನೆಗಳನ್ನು ಕಾರ್ಪೋರೆಟ್ ಸಂಸ್ಥೆಗಳ ಕೈಗೆ ಒಪ್ಪಿಸುವ ಪ್ರಯತ್ನ ಖಂಡನೀಯವಾಗಿದ್ದು, ಇದು ಜನವಿರೋಧಿ ನೀತಿಯಾಗಿದೆ. ಇಂತಹ ಕ್ರಮಗಳ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸಲಾಗುವುದು. ಜೊತೆಗೆ ಕಾಂಗ್ರೆಸ್ ಪಕ್ಷವು ಗ್ರಾಮೀಣ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ಹೋರಾಟ ರೂಪಿಸಿ ನರೆಗಾ ಯೋಜನೆ ರದ್ದುಪಡಿಸುವ ಪ್ರಯತ್ನಗಳನ್ನು ತಡೆಯಲು ಮುಂದಾಗಲಿದೆ ಎಂದು ಸಚಿವರು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande