ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಹಸಿರು ನಿಶಾನೆ
ನವದೆಹಲಿ, 17 ಜನವರಿ (ಹಿ.ಸ.) : ಆ್ಯಂಕರ್ : ದೇಶ ತನ್ನ ಮೊದಲ ವಂದೇ ಭಾರತ್ ಸ್ಲೀಪರ್ ರೈಲನ್ನು ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ರೈಲಿಗೆ ಹಸಿರು ನಿಶಾನೆ ತೋರಿದರು. ಈ ಅತ್ಯಾಧುನಿಕ ರೈಲು ಕೋಲ್ಕತ್ತಾ (ಹೌರಾ) ಮತ್ತು ಗುವಾಹಟಿ (ಕಾಮಾಖ್ಯ) ನಡುವಿನ ಮ
Pm


ನವದೆಹಲಿ, 17 ಜನವರಿ (ಹಿ.ಸ.) :

ಆ್ಯಂಕರ್ : ದೇಶ ತನ್ನ ಮೊದಲ ವಂದೇ ಭಾರತ್ ಸ್ಲೀಪರ್ ರೈಲನ್ನು ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ರೈಲಿಗೆ ಹಸಿರು ನಿಶಾನೆ ತೋರಿದರು.

ಈ ಅತ್ಯಾಧುನಿಕ ರೈಲು ಕೋಲ್ಕತ್ತಾ (ಹೌರಾ) ಮತ್ತು ಗುವಾಹಟಿ (ಕಾಮಾಖ್ಯ) ನಡುವಿನ ಮಾರ್ಗದಲ್ಲಿ ಸಂಚರಿಸಲಿದ್ದು, 958 ಕಿಲೋಮೀಟರ್ ದೂರವನ್ನು ಕೇವಲ 14 ಗಂಟೆಗಳಲ್ಲಿ ಕ್ರಮಿಸಲಿದೆ. ಪ್ರಸ್ತುತ ಈ ದೂರಕ್ಕೆ 17 ಗಂಟೆಗಳ ಕಾಲಾವಧಿ ಬೇಕಾಗುತ್ತದೆ.

ಉದ್ಘಾಟನಾ ಸಮಾರಂಭದ ವೇಳೆ ಪ್ರಧಾನಿ ಮೋದಿ ರೈಲಿನೊಳಗೆ ಮಕ್ಕಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ವಿದ್ಯಾರ್ಥಿಗಳು ಕವಿತೆಗಳನ್ನು ಪಠಿಸಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಪ್ರಧಾನಿಯವರು ಹಸ್ತಾಕ್ಷರ ನೀಡಿ ತಮ್ಮ ಅನುಭವಗಳನ್ನೂ ಹಂಚಿಕೊಂಡರು. ಇದೇ ವೇಳೆ ರೈಲು ಚಾಲಕ ಹಾಗೂ ಸಿಬ್ಬಂದಿಯೊಂದಿಗೆ ಕೂಡ ಅವರು ಸಂವಾದ ನಡೆಸಿದರು.

ನಿಲ್ದಾಣದಲ್ಲಿ ತ್ರಿವರ್ಣ ಧ್ವಜಗಳನ್ನು ಹಿಡಿದ ಜನರು ಪ್ರಧಾನಿಯನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಈ ವೇಳೆ ದೊಡ್ಡ ಸಂಖ್ಯೆಯಲ್ಲಿ ಜನಸಮೂಹ ಸೇರಿತ್ತು. ಕಾರ್ಯಕ್ರಮದಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಧಾನಿಗೆ ದೇವಿಯ ಪ್ರತಿಮೆಯನ್ನು ಕಾಣಿಕೆಯಾಗಿ ನೀಡಿದರು.

ರೈಲ್ವೆ ಮಂಡಳಿಯ ಮಾಹಿತಿಯಂತೆ, ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ RAC ವ್ಯವಸ್ಥೆ ಇರುವುದಿಲ್ಲ. ಈ ರೈಲಿನಲ್ಲಿ ಒಟ್ಟು 16 ಬೋಗಿಗಳು ಇರಲಿದ್ದು, ಅವುಗಳಲ್ಲಿ 11 ಮೂರನೇ AC, 4 ಎರಡನೇ AC ಮತ್ತು 1 ಮೊದಲ AC ಬೋಗಿ ಸೇರಿವೆ.

ದರಗಳು ರಾಜಧಾನಿ ಎಕ್ಸ್‌ಪ್ರೆಸ್‌ನಂತಹ ಪ್ರೀಮಿಯಂ ರೈಲುಗಳಿಗಿಂತ ಸ್ವಲ್ಪ ಹೆಚ್ಚಿರಲಿದ್ದು, ಗುವಾಹಟಿಯಿಂದ ಹೌರಾಗೆ ಮೂರನೇ AC ದರವನ್ನು ಸುಮಾರು ₹2,300 ಎಂದು ನಿಗದಿಪಡಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande