ಕಾಂಗ್ರೆಸ್ ಸರ್ಕಾರದಿಂದ ದಮನಕಾರಿ ಧೋರಣೆ : ವಿಜಯೇಂದ್ರ
ಬೆಂಗಳೂರು, 17 ಜನವರಿ (ಹಿ.ಸ.) : ಆ್ಯಂಕರ್ : ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಲಿಖಿತ ನಿಯಮವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳ
ಕಾಂಗ್ರೆಸ್ ಸರ್ಕಾರದಿಂದ ದಮನಕಾರಿ ಧೋರಣೆ : ವಿಜಯೇಂದ್ರ


ಬೆಂಗಳೂರು, 17 ಜನವರಿ (ಹಿ.ಸ.) :

ಆ್ಯಂಕರ್ : ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಲಿಖಿತ ನಿಯಮವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದೇಶದ ಭದ್ರತೆಗೆ ಸವಾಲಾಗಿರುವ ಅಕ್ರಮ ವಲಸಿಗರ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿರುವುದು ಖಂಡನೀಯವಾಗಿದ್ದು, ಇದು ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣ ಮತ್ತು ಓಲೈಕೆ ರಾಜಕೀಯಕ್ಕಾಗಿ, ರಾಜ್ಯದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿಯ ವಿರುದ್ಧ ಧ್ವನಿ ಎತ್ತಿ ಸಮಾಜದ ಸುರಕ್ಷತೆಗಾಗಿ ಹೋರಾಡುತ್ತಿರುವವರನ್ನು ಬಂಧಿಸುತ್ತಿದೆ ಎಂದು ಆರೋಪಿಸಿದರು.

ಸರ್ಕಾರವೇ ಕೈಗೊಳ್ಳಬೇಕಿದ್ದ ಕ್ರಮವನ್ನು ಸಮಾಜಪರ ಸಂಘಟನೆಗಳು ಕೈಗೊಂಡಾಗ, ಅವರ ಮೇಲೆಯೇ ಪೊಲೀಸ್ ಬಲಪ್ರಯೋಗ ಮಾಡಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ವಿಜಯೇಂದ್ರ ಟೀಕಿಸಿದರು.

ಇನ್ನೊಂದೆಡೆ, ಮಹಿಳಾ ಸರ್ಕಾರಿ ಅಧಿಕಾರಿಗೆ ಅಸಭ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ತಲೆಮರೆಸಿಕೊಂಡಿದ್ದರೂ, ಪೊಲೀಸರಿಗೆ ಆತನ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು.

ಸ್ವಪಕ್ಷದ ಅಪರಾಧಿಗಳಿಗೆ ರಾಜಾತಿಥ್ಯ ನೀಡುತ್ತಾ, ಸಮಾಜದ ಹಿತಕ್ಕಾಗಿ ನಿಲ್ಲುವವರ ಮೇಲೆ ದಮನಕಾರಿ ನೀತಿ ಅನುಸರಿಸುವುದೇ ಈ ಕಾಂಗ್ರೆಸ್ ಸರ್ಕಾರದ ನಾಚಿಕೆಗೇಡಿನ ಆಡಳಿತ ವೈಖರಿಯಾಗಿದೆ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ತನ್ನ ಪಕ್ಷಪಾತ ಧೋರಣೆಯನ್ನು ತಕ್ಷಣ ಕೈಬಿಟ್ಟು, ಕಾನೂನು ಎಲ್ಲರಿಗೂ ಸಮಾನವಾಗಿರುವಂತೆ ಜಾರಿಗೆ ತರಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕ ಹಕ್ಕುಗಳ ದಮನದ ವಿರುದ್ಧ ರಾಜ್ಯದ ಜನತೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande