
ಹುಬ್ಬಳ್ಳಿ, 17 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿರುವ ನಡುವೆಯೇ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಹೊಸ ಸಂಚಲನಕ್ಕೆ ಕಾರಣವಾಗಿದೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, “ಹೈಕಮಾಂಡ್ ಬೀದಿ ದಾಸಯ್ಯನನ್ನೇ ಮುಖ್ಯಮಂತ್ರಿ ಮಾಡಿದರೂ ನಾವು ಒಪ್ಪಿಕೊಳ್ಳುತ್ತೇವೆ” ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಪಿಸಿಸಿ ಅಧ್ಯಕ್ಷರು. ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವುದು ಸಹಜ. ನಾನು ಅಥವಾ ಬೇರೆ ಯಾವ ನಾಯಕರು ದೆಹಲಿಗೆ ಹೋದರೂ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತೇವೆ” ಎಂದರು.
ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ ಜಮೀರ್, ನವೆಂಬರ್ ಕ್ರಾಂತಿ ಎಲ್ಲವೂ ಮುಗಿದಿದೆ. ಇಲ್ಲಿ ಈಗ ಕ್ರಾಂತಿಯೂ ಇಲ್ಲ, ಬ್ರಾಂತಿಯೂ ಇಲ್ಲ. 2028ರವರೆಗೆ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. ಅಲ್ಲಿವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ. ಸಿಎಂ ಬದಲಾವಣೆ ನಮ್ಮ ಕೈಯಲ್ಲಿಲ್ಲ, ಅದು ಹೈಕಮಾಂಡ್ ನಿರ್ಧಾರ. ಅವರು ಯಾರನ್ನೇ ಆಯ್ಕೆ ಮಾಡಿದರೂ ನಾವು ಒಪ್ಪುತ್ತೇವೆ” ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa