
ಉಡುಪಿ, 17 ಜನವರಿ (ಹಿ.ಸ.) :
ಆ್ಯಂಕರ್ : ಉಡುಪಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತೋಟಗಾರಿಕೆ ಇಲಾಖೆಯ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ ಹಾಗೂ ಪರಂಪರಾಗತ ಕೃಷಿ ವಿಕಾಸ ಯೋಜನೆಗಳ ಅನುಷ್ಠಾನ ಕುರಿತಂತೆ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ, ಬೆಳೆ ವಿಮೆ ಯೋಜನೆಯಡಿ ರೈತರಿಗೆ ಹೆಚ್ಚು ಅನುಕೂಲವಾಗುವಂತೆ ಟರ್ಮ್ ಶೀಟ್‌ಗಳನ್ನು ಸಿದ್ಧಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಅಲ್ಲದೆ, ಪರಂಪರಾಗತ ಕೃಷಿ ವಿಕಾಸ ಯೋಜನೆಯ ಅಡಿಯಲ್ಲಿ ರೈತರು ಸಾವಯವ ಕೃಷಿಗೆ ಪರಿವರ್ತನೆಗೊಳ್ಳಲು ಅಗತ್ಯ ಸೌಲಭ್ಯಗಳನ್ನು ಒದಗಿಸುವುದು, ಉತ್ತಮ ಗುಣಮಟ್ಟದ ಸಾವಯವ ಉತ್ಪನ್ನಗಳ ಉತ್ಪಾದನೆಗೆ ಉತ್ತೇಜನ ನೀಡುವುದು ಹಾಗೂ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸುವ ಬಗ್ಗೆ ಮಹತ್ವದ ಚರ್ಚೆ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa