ಜ.19 ರಿಂದ24ರವರೆಗೆ ಅರೇಬಿಕ್ ಪರೀಕ್ಷೆ
ವಿಜಯಪುರ, 18 ಜನವರಿ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಜ.19 ರಿಂದ 24ರವರೆಗೆ ಅರೇಬಿಕ್ ಪರೀಕ್ಷೆಗಳು ನಡೆಯಲಿವೆ. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರನ್ವಯ ನ
ಜ.19 ರಿಂದ24ರವರೆಗೆ ಅರೇಬಿಕ್ ಪರೀಕ್ಷೆ


ವಿಜಯಪುರ, 18 ಜನವರಿ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಜ.19 ರಿಂದ 24ರವರೆಗೆ ಅರೇಬಿಕ್ ಪರೀಕ್ಷೆಗಳು ನಡೆಯಲಿವೆ.

ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ,ಸಿಬ್ಬಂದಿ ಮತ್ತು ಇತರರು ಮೊಬೈಲ್ ತರುವುದನ್ನು ಹಾಗು ಅದರ ಬಳಕೆ ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ,ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಝರಾಕ್ಸ್ ಅಂಗಡಿಗಳು,ಕಂಪ್ಯೂಟರ್ ಕೇಂದ್ರಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande