ನಮ್ಮನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ : ಸಿದ್ದರಾಮಯ್ಯ
ಪ್ರತಿ
Cm


ಮೈಸೂರು, 18 ಜನವರಿ (ಹಿ.ಸ.) :

ಆ್ಯಂಕರ್ : ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು.

ಬಳ್ಳಾರಿ ಪ್ರಕರಣದ ಬಗ್ಗೆ ಬಿಜೆಪಿ ಜನಾಂದೋಲನ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರತಿ ಪಕ್ಷದಲ್ಲಿರುವಾಗ ಯಾವ ಆಂದೋಲನ, ಪ್ರತಿಭಟನೆಗಳನ್ನು ಮಾಡುತ್ತಾರೆ ಎನ್ನುವುದು ಅವರ ಪಕ್ಷಕ್ಕೆ ಸೇರಿದ ವಿಚಾರ. ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದರು.

ಶ್ರೀರಾಮುಲು, ಜನಾರ್ಧನ ರೆಡ್ಡಿ ಯವರು ಕಾಂಗ್ರೆಸ್ ನಾಯಕರನ್ನು ಏಕವಚನದಲ್ಲಿ ವಾಗ್ದಾಳಿ ಮಾಡಿರುವ ಬಗ್ಗೆ ಮಾತನಾಡಿ ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದೂ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದಾಗ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ವರದಿ ಕೊಟ್ಟಿದ್ದಾರೆ ಎಂದರು.

ಲೋಕ ಸಭಾ ಚುನಾವಣೆಗೆ ಪ್ರಚಾರಕ್ಕೆ ಬಂದಾಗ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು ಎಂದರು.

ಸಂಸದೀಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದರು.

ಕಾಂಗ್ರೆಸ್ ರಿಪಬ್ಲಿಕ್ ಆಫ್ ಕರ್ನಾಟಕ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು

ಕಾಂಗ್ರೆಸ್ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ ? ಎಂದು ಸಿಎಂ ಪ್ರಶ್ನಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande