
ಹೊನ್ನಾವರ, 18 ಜನವರಿ (ಹಿ.ಸ.) :
ಆ್ಯಂಕರ್ : ಹೊನ್ನಾವರ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸುಳಿಮುರ್ಕಿ ಹಾಗೂ ಮೊಗೇಹಳ್ಳ ವಲಯದಲ್ಲಿ ಸತತವಾಗಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತಗಳ ಪ್ರಮುಖ ಕಾರಣಗಳ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದರು, ರಸ್ತೆ ಅಗಲೀಕರಣ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಈ ಹಿನ್ನೆಲೆಯಲ್ಲಿ ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ರಸ್ತೆ ವಿಸ್ತರಣೆಗೆ ಅಡ್ಡಿಯಾಗಿರುವ ಅಡೆತಡೆಗಳನ್ನು ಶೀಘ್ರವಾಗಿ ನಿವಾರಿಸುವಂತೆ ಸೂಚನೆ ನೀಡಿದರು.
ರಸ್ತೆ ಅಗಲೀಕರಣ ಕಾಮಗಾರಿಯನ್ನು ತಡವಿಲ್ಲದೆ ಆರಂಭಿಸಿ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ ಸಂಸದ ಕಾಗೇರಿ, ಅಪಘಾತಗಳ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa