
ಶಿವಮೊಗ್ಗ, 18 ಜನವರಿ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ರೆಡ್ಡಿ ಸಂಘ ಇವರುಗಳ ಸಹಯೋಗದೊಂದಿಗೆ ಜ. 19 ರಂದು ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ವಿಶೇಷ ಆಹ್ವಾನಿತರಾಗಿ ಆಗಮಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸಲಿದ್ದು, ಭದ್ರಾವತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಸಾಗರ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ/ ಮಂಡಳಿ/ ಪ್ರಾಧಿಕಾರಗಳ ಅಧ್ಯಕ್ಷರುಗಳು, ಜಿಲ್ಲಾ ರೆಡ್ಡಿ ಸಂಘದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪೊಲೀಸ್ ಅಧೀಕ್ಷಕರು, ಮಹಾನಗರಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿ, ಸಿಬ್ಬಂದಿ ವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಪಾಲ್ಗೊಳ್ಳುವರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa