ಪ್ರಾಮಾಣಿಕವಾಗಿ ಪರಿಹಾರ ನೀಡುತ್ತವೆ : ಸಚಿವರು
ಗದಗ, 18 ಜನವರಿ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಹಾಗೂ ಉತ್ಖನನ ಕಾರ್ಯಗಳ ಪ್ರಗತಿ ಕುರಿತು ಗದಗ ಜಿಲ್ಲಾಡಳಿತ ಭವನದಲ್ಲಿ ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲರು ವಿವರಗಳನ್ನು ಮಾಧ್ಯಮಗಳಿಗೆ ನೀಡಿದರು. ಲಕ್ಕುಂಡಿಯಲ
ಫೋಟೋ


ಗದಗ, 18 ಜನವರಿ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಹಾಗೂ ಉತ್ಖನನ ಕಾರ್ಯಗಳ ಪ್ರಗತಿ ಕುರಿತು ಗದಗ ಜಿಲ್ಲಾಡಳಿತ ಭವನದಲ್ಲಿ ಮಹತ್ವದ ಸಭೆ ನಡೆಯಿತು. ಸಭೆ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲರು ವಿವರಗಳನ್ನು ಮಾಧ್ಯಮಗಳಿಗೆ ನೀಡಿದರು.

ಲಕ್ಕುಂಡಿಯಲ್ಲಿ ಪ್ರಜ್ವಲ್ ರಿತ್ತಿಗೆ ಸಿಕ್ಕ ಪುರಾತನ ನಿಧಿಯನ್ನು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಅರ್ಪಿಸಿದ ವಿಚಾರವನ್ನು ಸಭೆಯಲ್ಲಿ ವಿಶೇಷವಾಗಿ ಚರ್ಚಿಸಲಾಗಿದೆ. ಇಂತಹ ಆದರ್ಶ ಕಾರ್ಯಕ್ಕೆ ಸರ್ಕಾರದ ವತಿಯಿಂದ ಯಾವ ರೀತಿಯ ಸಹಾಯ ನೀಡಬೇಕು ಎಂಬ ಬಗ್ಗೆ ಚಿಂತನೆ ನಡೆದಿದೆ ಎಂದು ಸಚಿವರು ಹೇಳಿದರು.

ಲಕ್ಕುಂಡಿಯ ಬಯಲು ವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಈಗಾಗಲೇ 165 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಸಂಗ್ರಹಾಲಯ ವಿಸ್ತರಣೆಗಾಗಿ ಮೂರು ಎಕರೆ ಭೂಮಿಯನ್ನು ಪಡೆದುಕೊಳ್ಳಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯ ಪುರಾತತ್ವ ಇಲಾಖೆಯು 2025ರ ನವೆಂಬರ್ 29ರಂದು ಲಕ್ಕುಂಡಿಯ 13 ದೇವಸ್ಥಾನಗಳು ಹಾಗೂ 3 ಬಾವಿಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಘೋಷಿಸಿದೆ. ಇದು ರಾಜ್ಯ ಪುರಾತತ್ವ ಇಲಾಖೆಯಿಂದ ಮೊದಲ ಬಾರಿಗೆ ನಡೆದ ಘೋಷಣೆ ಎಂದು ಸಚಿವರು ಹೇಳಿದರು. ಇದೀಗ ಲಕ್ಕುಂಡಿಯ ಇನ್ನೂ 8 ದೇವಸ್ಥಾನಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಘೋಷಿಸಲು ಮನವಿ ಸಲ್ಲಿಸಲಾಗಿದ್ದು, ಈ ಕುರಿತು ಎಲ್ಲಾ ಕ್ರಮ ಕೈಗೊಳ್ಳುವಂತೆ ಪುರಾತತ್ವ ಇಲಾಖೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಫೆಬ್ರವರಿ ಅಂತ್ಯದೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಲಕ್ಕುಂಡಿಯ ಒಟ್ಟು 15 ದೇವಸ್ಥಾನಗಳು ಹಾಗೂ 5 ಬಾವಿಗಳನ್ನು ರಾಜ್ಯ ಸಂರಕ್ಷಿತ ಸ್ಮಾರಕಗಳಾಗಿ ಘೋಷಿಸುವ ಉದ್ದೇಶವಿದ್ದು, ತಿಂಗಳೊಳಗೆ ಪ್ರಸ್ತಾವನೆ ಕಳುಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಇದಲ್ಲದೆ, ಲಕ್ಕುಂಡಿಯ ಆರು ಪ್ರಮುಖ ದೇವಸ್ಥಾನಗಳ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಫೆಬ್ರವರಿ ತಿಂಗಳಲ್ಲಿ ವರ್ಕ್ ಆರ್ಡರ್ ನೀಡಿ ಕೆಲಸ ಆರಂಭಿಸಲಾಗುತ್ತದೆ ಎಂದು ತಿಳಿಸಿದರು.

ಲಕ್ಕುಂಡಿಯಲ್ಲಿ ಮಣ್ಣಿನೊಳಗೆ ಹುದುಗಿ ಹೋಗಿರುವ, ಕಾಣೆಯಾಗಿರುವ ದೇವಸ್ಥಾನಗಳ ಉತ್ಖನನಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ. ಮಾರ್ಚ್ ಒಳಗಾಗಿ ಉತ್ಖನನ ಕಾರ್ಯ ಆರಂಭಿಸಿ, ಮುಚ್ಚಿಹೋದ ದೇವಸ್ಥಾನಗಳನ್ನು ಹೊರತೆಗೆಯುವ ಕೆಲಸ ಕೈಗೊಳ್ಳಲಾಗುವುದು. ಇತಿಹಾಸದ ಅಮೂಲ್ಯ ಕುರುಹುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಕ್ರಮ ವಹಿಸಲಿದೆ ಎಂದು ಸಚಿವರು ಹೇಳಿದರು.

ಮಾರ್ಚ್ ಅಂತ್ಯದೊಳಗೆ ಪುರಾತತ್ವ ಸ್ಥಳಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು. ಜೊತೆಗೆ ಸುಮಾರು 500 ಪುರಾತನ ಅವಶೇಷಗಳನ್ನು ಶೀಘ್ರದಲ್ಲೇ ಸಂಗ್ರಹಿಸುವ ಕಾರ್ಯ ಕೈಗೊಳ್ಳಲಾಗುತ್ತದೆ ಎಂದು ಸಚಿವ ಎಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದರು.

ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣವನ್ನಾಗಿ ರೂಪಿಸುವ ದಿಕ್ಕಿನಲ್ಲಿ ರಾಜ್ಯ ಸರ್ಕಾರ ನಿರಂತರ ಹಾಗೂ ಸುದೃಢ ಹೆಜ್ಜೆ ಇಡುತ್ತಿದೆ ಎಂಬುದು ಈ ಸಭೆಯಿಂದ ಮತ್ತೊಮ್ಮೆ ಸ್ಪಷ್ಟವಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande