
ದಾವಣಗೆರೆ 18 ಜನವರಿ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6ನೇ ತರಗತಿ (ಸಿ.ಬಿ.ಎಸ್.ಸಿ ಪಠ್ಯಕ್ರಮ), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6ನೇ ತರಗತಿ (ರಾಜ್ಯ ಪಠ್ಯಕ್ರಮ)ದಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಪ್ರವೇಶಕ್ಕಾಗಿ ಲಭ್ಯವಿರುತ್ತದೆ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ನಡೆಸುತ್ತಿದ್ದು, ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಫೆಬ್ರವರಿ 10 ರೊಳಗಾಗಿ ಸೇವಾ ಸಿಂಧು ಪೋರ್ಟಲ್ Website:https://sevasindhu services.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa