
ಹಳಿಯಾಳ, 18 ಜನವರಿ (ಹಿ.ಸ.) :
ಆ್ಯಂಕರ್ : ಹಳಿಯಾಳ ಪಟ್ಟಣದ ಯಲ್ಲಾಪುರ ನಾಕಾದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಈಗಿನ ಪುತ್ಥಳಿಯನ್ನು ಬದಲಿಸಿ, ಅದೇ ಸ್ಥಳದಲ್ಲಿ ನಿಂತ ಭಂಗಿಯಲ್ಲಿರುವ ದೊಡ್ಡ ಗಾತ್ರದ ನೂತನ ಮೂರ್ತಿಯನ್ನು ಪ್ರತಿಷ್ಠಾಪಿಸುವ ಕಾಮಗಾರಿಗೆ ಇಂದು ಶಾಸಕ ಆರ್.ವಿ. ದೇಶಪಾಂಡೆ ಅವರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ದೇಶಪಾಂಡೆ, ನೂತನವಾಗಿ ಪ್ರತಿಷ್ಠಾಪಿಸಲಿರುವ ಮೂರ್ತಿ ಡಾ. ಅಂಬೇಡ್ಕರ್ ಅವರ ಆದರ್ಶಗಳು, ಸಂವಿಧಾನಾತ್ಮಕ ಮೌಲ್ಯಗಳು, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶೋಷಿತ ಮತ್ತು ದಮನಿತ ವರ್ಗಗಳ ಉನ್ನತಿಗಾಗಿ ಅವರು ನೀಡಿದ ಅಪಾರ ಕೊಡುಗೆಯನ್ನು ಮುಂದಿನ ಪೀಳಿಗೆಗೆ ಸ್ಮರಣೀಯವಾಗಿ ಸಾರುವ ಸಂಕೇತವಾಗಲಿದೆ ಎಂದು ಹೇಳಿದರು.
ಸಾರ್ವಜನಿಕರಲ್ಲಿ ಪ್ರೇರಣೆ ಮೂಡಿಸುವುದರ ಜೊತೆಗೆ ಪಟ್ಟಣದ ಸೌಂದರ್ಯವರ್ಧನೆಗೂ ಸಹಕಾರಿಯಾಗುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು, ಸಮಾಜದ ಹಿರಿಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa