ಸಂಚಾರ ಜಾಗೃತಿಗೆ ಮೈಸೂರು ಸಂಚಾರ ಪೊಲೀಸ್‌ರಿಂದ ವಿಶೇಷ ಅಭಿಯಾನ
ಮೈಸೂರು, 18 ಜನವರಿ (ಹಿ.ಸ.) : ಆ್ಯಂಕರ್ : 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಮೈಸೂರಿನ ದೇವರಾಜ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ನಗರದಲ್ಲಿನ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ನಿಯಮಗಳ ಜಾಗೃತಿ ಅಭಿಯಾನವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಸಂಚ
campaign


ಮೈಸೂರು, 18 ಜನವರಿ (ಹಿ.ಸ.) :

ಆ್ಯಂಕರ್ : 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಮೈಸೂರಿನ ದೇವರಾಜ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ನಗರದಲ್ಲಿನ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ನಿಯಮಗಳ ಜಾಗೃತಿ ಅಭಿಯಾನವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಸಂಚಾರ ನಿಯಮಗಳ ಮಹತ್ವವನ್ನು ತಿಳಿಸುವ ಜಾಗೃತಿ ಫಲಕಗಳನ್ನು ಪ್ರದರ್ಶಿಸಲಾಯಿತು. ಹೆಲ್ಮೆಟ್ ಧಾರಣೆ, ಸೀಟ್‌ಬೆಲ್ಟ್ ಬಳಕೆ, ವೇಗ ನಿಯಂತ್ರಣ, ಸಂಚಾರ ಸಂಕೇತಗಳ ಪಾಲನೆ ಸೇರಿದಂತೆ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಪ್ರಮುಖ ಸಂದೇಶಗಳನ್ನು ಫಲಕಗಳ ಮೂಲಕ ಸಾರಲಾಯಿತು.

ಅಭಿಯಾನದಿಂದ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಹೆಚ್ಚಿಸುವುದರ ಜೊತೆಗೆ ಅಪಘಾತಗಳ ಪ್ರಮಾಣ ಕಡಿಮೆ ಮಾಡುವ ಉದ್ದೇಶವನ್ನು ಹೊಂದಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande