
ವಿಜಯಪುರ, 19 ಜನವರಿ (ಹಿ.ಸ.) :
ಆ್ಯಂಕರ್ : ನನ್ನ ಭಾರತ ನನ್ನ ಮತ-ಭಾರತೀಯ ಪ್ರಜಾಪ್ರಭುತ್ವದ ಹೃದಯದಲ್ಲಿ ಭಾರತೀಯ ನಾಗರಿಕೆ ಎಂಬ ಘೋಷ ವಾಕ್ಯದಡಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿ 25 ರಂದು ಆಚರಿಸಲಾಗುವ ರಾಷ್ಟ್ರೀಯ ಮತದಾರರ ದಿನಾಚಾರಣೆ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೋಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ 16ನೇ ರಾಷ್ಟ್ರೀಯ ಮತದಾರರ ದಿನಾಚಾರಣೆ ಹಿನ್ನಲೆಯಲ್ಲಿ ನಡೆದ ಪೂರ್ವ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಯುವಕರಲ್ಲಿ ಮತದಾನದ ಜಾಗೃತಿ ಮೂಡಿಸುವ ಕುರಿತು ಹಾಗೂ ಮತದಾನದ ಮಹತ್ವದ ಕುರಿತು ಈ ಕಾರ್ಯಕ್ರಮವನ್ನು ಭೂತ ಮಟ್ಟದಲ್ಲಿ,, ತಾಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಸೂಚನೆ ನೀಡಿದರು.
16ನೇ ರಾಷ್ಟ್ರೀಯ ಮತದಾರರ ದಿನಚಾರಣೆಯ ಅಂಗವಾಗಿ ಪೂರ್ವಭಾವಿಯಾಗಿ ಜ.23 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಚೇರಿ ಮತ್ತು ಅಧೀನ ಕಚೇರಿಗಳಲ್ಲಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಬೇಕು. ಈ ಬಗ್ಗೆ ಛಾಯಾಚಿತ್ರಗಳನ್ನು ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಅಪಲೋಡ್ ಮಾಡಿ, ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಜನರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಹಾಗೂ ಮತದಾನದ ಮಹತ್ವದ ಕುರಿತ ತಿಳಿಸಿಕೊಡುವ ನಿಟ್ಟಿನಲ್ಲಿ. ಯುವ ಮತದಾರರನ್ನು ಆಹ್ವಾನಿಸಿ, ಅವರು ಹೊಸದಾಗಿ ನೋಂದಾಯಿಸಿಕೊ0ಡಿರುವ ಮತದಾರರ ಗುರುತಿನ ಚೀಟಿ ವಿತರಿಸಲು ಈ ಕಾರ್ಯಕ್ರಮದಲ್ಲಿ ಕ್ರಮ ವಹಿಸಬೇಕು.ಮತದಾನದೆ ಅರಿವು ಮತ್ತು ಜಾಗೃತಿ ಮೂಡಿಸಲು ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಬೇಕು. ಜ.25 ರಂದು ನಗರದ ಜಿಲ್ಲಾಪಂಚಾಯತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರಿ,ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ರಾಷ್ಟ್ರೀಯ ಮತದಾರರ ದಿನಾಚಾರಣೆಯನ್ನು ಯಶಸ್ವಿಯಾಗಿ ಅಚರಿಸಲು ಅಗತ್ಯವಿರುವ ರೂಪುರೇಷ ಸಿದ್ಧಪಡಿಸಿಕೊಳ್ಳುವಂತೆ ಸಂಬ0ಧಿಸಿದ ಅಧಿಕಾರಿಗಳಿ ನಿರ್ದೇಶನ ನೀಡಿದರು.
ಸಭೆಯಲ್ಲಿ ವಿಜಯಪುರದ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ವಿಜಯಪುರ ತಹಶಿಲ್ದಾರರಾದ ಪ್ರಶಾಂತ ಚನಗೊಂಡ, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರರಾದ ಸಚ್ಚಿದಾನಂದ ತೇರದಾಳ, ಪಂಚಾಯತ್ ರಾಜ್ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆ, ಸಾಮಾಜಿಕ ಸೇವಾ ಸಂಸ್ಥೆ, ಯುವ ಸ್ವಯಂಸೇವಾ ಸಂಸ್ಥೆ, ಎನ್.ಎನ್.ಎಸ್, ಎನ್.ಸಿ.ಸಿ, ಸ್ಕೌಟ್ಸ್ ಹಾಗೂ ಗೈಡ್ಸ್ ಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande