
ಬೆಳಗಾವಿ, 19 ಜನವರಿ (ಹಿ.ಸ.) :
ಆ್ಯಂಕರ್ : ಶಾಸಕ ಜನಾರ್ದನ ರೆಡ್ಡಿ, ಮುಖ್ಯಮಂತ್ರಿ ಹಾಗೂ ಸಚಿವರು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಜನಾರ್ದನ ರೆಡ್ಡಿಯವರೇ ರಾಜ್ಯದ ಸಂಪತ್ತನ್ನು ಲೂಟಿ ಮಾಡಿ ಜೈಲಿಗೆ ಹೋಗಿರುವವರು. ಅವರ ವಿರುದ್ಧದ ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆಯಲ್ಲಿದೆ. ಇಂತಹವರು ನಮ್ಮ ಮೇಲೆ ಆರೋಪ ಮಾಡುವುದಕ್ಕೆ ಯಾವುದೇ ನೈತಿಕ ಅಧಿಕಾರವಿಲ್ಲ” ಎಂದು ಹೇಳಿದರು.
ಪ್ರತಿ ಪಕ್ಷಗಳು ಸತ್ಯವಿಲ್ಲದ ಆರೋಪಗಳನ್ನು ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸದಲ್ಲಿ ನಿರತವಾಗಿವೆ ಎಂದು ಟೀಕಿಸಿದ ಸಿದ್ದರಾಮಯ್ಯ, “ಸುಳ್ಳು ಆರೋಪಗಳಿಂದ ರಾಜಕೀಯ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ” ಎಂದರು.
ಇದೇ ವೇಳೆ ಜನವರಿ 22ರಿಂದ ರಾಜ್ಯ ವಿಧಾನ ಸಭೆ ಅಧಿವೇಶನ ಆರಂಭವಾಗಲಿದ್ದು, “ಪ್ರತಿ ಪಕ್ಷಗಳು ಆರೋಪ ಮಾಡುವ ಬದಲು ಅಧಿವೇಶನದಲ್ಲಿ ಚರ್ಚೆ ನಡೆಸಲಿ. ಸರ್ಕಾರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧವಾಗಿದೆ” ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa