ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆ ಖಚಿತ
ನವದೆಹಲಿ, 19 ಜನವರಿ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಿತಿನ್ ನಬಿನ್ ಅವರು ಸೋಮವಾರ ನವದೆಹಲಿಯಲ್ಲಿರುವ ಪಕ್ಷದ ಕೇಂದ್ರ ಪ್ರಧಾನ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆಯ ಅಂಗವಾಗಿ ಈ ನಾಮಪತ್ರ ಸಲ್ಲಿಕೆ ನಡೆಯ
Bjp


ನವದೆಹಲಿ, 19 ಜನವರಿ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಿತಿನ್ ನಬಿನ್ ಅವರು ಸೋಮವಾರ ನವದೆಹಲಿಯಲ್ಲಿರುವ ಪಕ್ಷದ ಕೇಂದ್ರ ಪ್ರಧಾನ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆಯ ಅಂಗವಾಗಿ ಈ ನಾಮಪತ್ರ ಸಲ್ಲಿಕೆ ನಡೆಯಿತು.

ಬಿಜೆಪಿಯ ಪ್ರಸ್ತುತ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಬಿಜೆಪಿ ಸಂಸದೀಯ ಪಕ್ಷದ ಬೆಂಬಲದೊಂದಿಗೆ ನಿತಿನ್ ನಬಿನ್ ಅವರು ನಾಮಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ನಿತಿನ್ ಗಡ್ಕರಿ ಸೇರಿದಂತೆ ಹಲವು ಹಿರಿಯ ಪಕ್ಷದ ನಾಯಕರು ಉಪಸ್ಥಿತರಿದ್ದರು. ಜೊತೆಗೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಘಟಕಗಳ ಅಧ್ಯಕ್ಷರೂ ಪಕ್ಷದ ಪ್ರಧಾನ ಕಚೇರಿಯಲ್ಲಿ ಹಾಜರಿದ್ದರು.

ಪಕ್ಷದ ಮೂಲಗಳ ಪ್ರಕಾರ, ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಿತಿನ್ ನಬಿನ್ ಅವರು ಏಕೈಕ ಅಭ್ಯರ್ಥಿಯಾಗಿದ್ದು, ಅವರ ಅವಿರೋಧ ಆಯ್ಕೆ ಖಚಿತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande