
ಗದಗ, 02 ಜನವರಿ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರು ಇದೆ ದಿನಾಂಕ 3.1.2026 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಗದಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಗದಗ ಇವರ ಸಹಯೋಗದಲ್ಲಿ 2025-26ನೇ ಸಾಲಿನ “ಸರ್ಕಾರಿ ನೌಕರರ ಕ್ರೀಡಾ ಹಾಗೂ ಸಾಂಸ್ಕೃತಿಕ ಹಬ್ಬ” ಗದಗ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಹಬ್ಬ ದಿ. 03-01-2026 ಶನಿವಾರ ಬೆಳಿಗ್ಗೆ 9-00 ಘಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ ಗದಗದಲ್ಲಿ ಏರ್ಪಡಿಸಲಾಗಿದೆ
ಈ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಹಬ್ಬವು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾಧ್ಯಕ್ಷರಾದ ಬಸವರಾಜ ಬಳ್ಳಾರಿ, ನೇತೃತ್ವದಲ್ಲಿ ನಡೆಯುತ್ತಿರುವುದು ಶ್ಲಾಘನೀಯ ಸಂಗತಿಯಾಗಿದೆ ಆದ್ದರಿಂದ ವಿವಿಧ ಇಲಾಖೆಯ ರಾಜ್ಯ ಸರ್ಕಾರಿ ನೌಕರರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ವೃಂದದ ನೌಕರರು ಕುಟುಂಬ ಸಮೇತ ಆಗಮಿಸಿಯಶಸ್ವಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗದಗ ಜಿಲ್ಲಾ ಶಾಖೆಯ ಕಾಯಾಧ್ಯಕ್ಷರಾದ ಸಿದ್ದಪ್ಪ ಎನ್ ಲಿಂಗದಾಳ ಜಿಲ್ಲಾ ಉಪಾಧ್ಯಕ್ಷರಾದ ಅಜಯಕುಮಾರ ಕಲಾಲ ಮತ್ತು ನಿರ್ದೇಶಕರಾದ ವಾಯ್ ಎನ್ ಕಡೇಮನಿ ಶ್ರೀಮತಿ ಸರೋಜಾ ಕಟ್ಟಿಮನಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP