ವಿಜಯಪುರದಲ್ಲಿ ಮಕ್ಕಳೊಂದಿಗೆ ಹೊಸ ವರ್ಷಾಚರಣೆ
ವಿಜಯಪುರ, 02 ಜನವರಿ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ,ಎಂ.ಬಿ.ಪಾಟೀಲ ಫೌಂಡೇಷನ್, ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ನಗರದ ಸರ್ಕಾರಿ ಬಾಲಕರ ಬಾಲಮಂದಿರ ವಿಜಯಪುರದಲ್ಲಿ ಹೊಸ ವರ್ಷಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಿ ಅವರು ಮಾತನಾಡಿದರು
ಡಿಸಿ


ವಿಜಯಪುರ, 02 ಜನವರಿ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ,ಎಂ.ಬಿ.ಪಾಟೀಲ ಫೌಂಡೇಷನ್, ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ನಗರದ ಸರ್ಕಾರಿ ಬಾಲಕರ ಬಾಲಮಂದಿರ ವಿಜಯಪುರದಲ್ಲಿ ಹೊಸ ವರ್ಷಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಿ ಅವರು ಮಾತನಾಡಿದರು.

ಮಕ್ಕಳು ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗಾಗಿ ಅನೇಕ ಸೌಲಭ್ಯ ಒದಗಿಸಿದೆ.ಇದರ ಸದುಪಯೋಗಪಡೆದುಕೊಂಡು ಸತತ ಪರಿಶ್ರ‌ಮಗಳಾಗಿ ಅಧ್ಯಯನ ಮಾಡಿ, ಉನ್ನತ ಹುದ್ದೆಗೇರುವ ಗುರಿ ಹೊಂದಬೇಕು ಎಂದು ಪ್ರೇರಣಾ ನುಡಿಗಳನ್ನಾಡಿದರು.

ಧಾರವಾಡದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಹಲವು ಯೋಜನೆ ಜಾರಿಗೆ ತರಲಾಗುತ್ತಿದೆ. ಬಾಲಮಂದಿರದ ಮಕ್ಕಳು ಅಪಾರ ಪ್ರತಿಭೆಯನ್ನು ಹೊಂದಿದ್ದು, ಅವರ ಭವಿಷ್ಯ ಉಜ್ವಲಗೊಳಿಸುವ ಜವಾಬ್ದಾರಿ ಅಧಿಕಾರಿ, ಸಿಬ್ಬಂದಿ ಮೇಲಿದೆ.ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ದಿಸೆಯಲ್ಲಿ ಕೆಲಸ ಮಾಡುವಂತೆ ಸಲಹೆ ನೀಡಿದರು. ವಿಜಯಪುರ ಜಿಲ್ಲೆಯಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುತ್ತಿದ್ದು, ಸಹಕಾರ ಕೋರಿದರು.

ಬಾಲಕರೊಂದಿಗೆ ಸಿಹಿ ಊಟ ಉಣಬಡಿಸಿ,ಗಣ್ಯರು ಮಕ್ಕಳೊಂದಿಗೆ ಊಟ ಸವಿದು ಆತ್ಮೀಯತೆ ಮೆರೆದರು.

ಈ ಸಂದರ್ಭದಲ್ಲಿ ಸರ್ಕಾರಿ ಬಾಲಕರ ಬಾಲಮಂದಿರದ ಮನೋಜ ಶಿವಲಾಲ ಜಾಧವ ಅವರು ಅತ್ಯಂತ ಕಠಿಣ ಪರೀಕ್ಷೆಯಾದ ಐಐಟಿಯಲ್ಲಿ ತೇರ್ಗಡೆಗೊಂಡು, ಐಐಟಿ ಧಾರವಾಡದಲ್ಲಿ ವ್ಯಾಸಂಗ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಿ, ಶುಭ ಕೋರಲಾಯಿತು.

ಸಮಾರಂಭದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡದ ಮಾನ್ಯ ಅಧ್ಯಕ್ಷರಾದ ಸಂಗಮೇಶ ಅ. ಬಬಲೇಶ್ವರ ಹಾಗೂ ವಿಜಯಪುರ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ ಅವರು ಸರ್ಕಾರಿ ಬಾಲಕರ ಬಾಲಮಂದಿರ ಆವರಣದಲ್ಲಿ ಸಸಿ ನೆಡುವ ಮೂಲಕ‌ ಹಸರೀಕರಣದ ಮಹತ್ವ ಸಾರಲಾಯಿತು.

ಪ್ಲಾಸ್ಟಿಕ್ ಮುಕ್ತ ವಾತಾವರಣ ನಿರ್ಮಾಣ ಹಾಗೂ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಸರ್ಕಾರಿ ಬಾಲಕರ ಬಾಲಮಂದಿರದ ಮಕ್ಕಳಿಗೆ ಸ್ಟೀಲ್ ವಾಟರ್ ಬಾಟಲ್‌ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ. ಚವ್ಹಾಣ, ಜಿಲ್ಲಾ ನಿರೂಪಣಾಧಿಕಾರಿ ಶ್ರೀಮತಿ ನಿರ್ಮಲಾ ಹೆಚ್. ಸುರಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ ದೀಪಾ ಕಾಳೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ದೀಪಾಕ್ಷಿ ಜಾನಕಿ,ಶ್ರೀಮತಿ ಭಾರತಿ ಹೊನ್ನಳ್ಳಿ, ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ ಜಿಗಳೂರು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಗೀತಾ ಎಸ್. ಗುತ್ತರಗಿಮಠ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು, ಸುಧಾರಣಾ ಸಂಸ್ಥೆಗಳ ಅಧೀಕ್ಷಕರು, ಇಲಾಖೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande