
ಬೆಂಗಳೂರು, 21 ಜನವರಿ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ದರ್ಗಾ ಜೋಗಿನಹಳ್ಳಿ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.
ಈ ಅಂಗನವಾಡಿ ಕೇಂದ್ರದ ಮೂಲಕ ತಾಯಿ–ಮಕ್ಕಳ ಪೌಷ್ಟಿಕತೆ, ಆರೋಗ್ಯ ಆರೈಕೆ ಹಾಗೂ ಪ್ರಾರಂಭಿಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಗ್ರಾಮೀಣ ಮಕ್ಕಳ ಸಮಗ್ರ ಅಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ವಿಶ್ವನಾಥ್ ರೆಡ್ಡಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನಾಗರಾಜು, ಉಪಾಧ್ಯಕ್ಷೆ ಶೋಭಾ ಭಾಯಿ, ಇಒ ಮಂಜುನಾಥ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa