ದಾವಣಗೆರೆ ಕುಂದುವಾಡ ಕೆರೆಯಲ್ಲಿ ಸ್ವಚ್ಛತಾ ಅಭಿಯಾನ
ದಾವಣಗೆರೆ, 21 ಜನವರಿ (ಹಿ.ಸ.) : ಆ್ಯಂಕರ್ : ದಾವಣಗೆರೆ ಮಹಾನಗರ ಪಾಲಿಕೆಯ ವತಿಯಿಂದ ಸ್ವಚ್ಛತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕುಂದುವಾಡ ಕೆರೆಯ ಆವರಣದಲ್ಲಿ ಆಯೋಜಿಸಿದ್ದ “ಪ್ಲಾಗಥಾನ್” ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವ
Cleaning


ದಾವಣಗೆರೆ, 21 ಜನವರಿ (ಹಿ.ಸ.) :

ಆ್ಯಂಕರ್ : ದಾವಣಗೆರೆ ಮಹಾನಗರ ಪಾಲಿಕೆಯ ವತಿಯಿಂದ ಸ್ವಚ್ಛತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕುಂದುವಾಡ ಕೆರೆಯ ಆವರಣದಲ್ಲಿ ಆಯೋಜಿಸಿದ್ದ “ಪ್ಲಾಗಥಾನ್” ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಅವರು ಕೆರೆಯ ಪ್ರಾಂಗಣವನ್ನು ವೀಕ್ಷಿಸಿ, ಸಾರ್ವಜನಿಕರೊಂದಿಗೆ ಕೈಜೋಡಿಸಿ ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಮಹತ್ವವನ್ನು ಪ್ರತಿಯೊಬ್ಬ ನಾಗರಿಕರೂ ಅರಿತು ದಿನನಿತ್ಯದ ಜೀವನದಲ್ಲಿ ಅನುಸರಿಸಬೇಕು ಎಂದು ಅವರು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande