
ವಿಜಯಪುರ, 21 ಜನವರಿ (ಹಿ.ಸ.) :
ಆ್ಯಂಕರ್ : ಖ್ಯಾತ ಉದ್ಯಮಿ ಡಿ. ವೈ. ಉಪ್ಪಾರ ಅವರ ನಿಧನಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕಂಬನಿ ಮಿಡಿದಿದ್ದಾರೆ.
ಬಸವನ ಬಾಗೇವಾಡಿ ತಾಲೂಕಿನ ಯಾಳವಾರ ಗ್ರಾಮದ ಸಾಮಾನ್ಯ ಕುಟುಂಬದಿಂದ ಬಂದ ಅವರು, ಗುತ್ತಿಗೆ ಕಾಮಗಾರಿಗಳ ಕ್ಷೇತ್ರದಲ್ಲಿ ಗುಣಮಟ್ಟದ ಕಾಮಗಾರಿಗಳ ಮೂಲಕ ಹೆಸರು ಮಾಡಿದ್ದರು. ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ನಾಡಿನಲ್ಲಿ ಹೆಸರಾಂತ ಕಾಮಗಾರಿಗಳನ್ನು ಮಾಡಿ ಅವರು ಯುವ ಗುತ್ತಿಗೆದಾರರಿಗೆ ಮಾದರಿಯಾಗಿದ್ದರು.
ಶೈಕ್ಷಣಿಕ ಮತ್ತು ಧಾರ್ಮಿಕ ಚಟುವಟಿಕೆಗಳಿಗೆ ಅಪಾರ ಕೊಡುಗೆ ನೀಡುವ ಮೂಲಕ ಕೊಡುಗೈ ದಾನಿ ಎನಿಸಿಕೊಂಡಿದ್ದ ಅವರು, ಬಡವರಿಗೂ ಸಾಕಷ್ಟು ನೆರವು ನೀಡಿದ್ದರು. ತಮ್ಮ ಜನಪ ಕೆಲಸಗಳ ಮೂಲಕ ಹೆಸರು ಮಾಡಿದ್ದಾರೆ. ಯಂಕಂಚಿ ದಾವಲಮಲಿಕ ಭಕ್ತರಾಗಿದ್ದ ಅವರು, ವಿನಮ್ರತೆ, ಶಿಸ್ತು, ಪ್ರಾಮಾಣಿಕತೆ, ಕಠಿಣ ಪರಿಶ್ರಮ, ದೂರದೃಷ್ಠಿಯ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡಿದ್ದರು. ನನಗೂ ಆತ್ಮೀಯರಾಗಿದ್ದ ಅವರ ವ್ಯಕ್ತಿತ್ವ ಸದಾ ಸ್ಮರಣೀಯವಾಗಿರಲಿದೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande