
ಕೊಪ್ಪಳ, 21 ಜನವರಿ (ಹಿ.ಸ.) :
ಆ್ಯಂಕರ್ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಹಾಗೂ 1ಎಂ1ಬಿ ಸಂಸ್ಥೆಯ ಸಹಯೋಗದಲ್ಲಿ ಜಿಲ್ಲೆಯ ತಳಕಲ್‌ನಲ್ಲಿರುವ ವಿಟಿಯು ಸ್ನಾತಕೋತ್ತರ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಜನವರಿ 25 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗಮೇಳದಲ್ಲಿ 30 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 10ನೇ ತರಗತಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಉದ್ಯೋಗಮೇಳದ ನೇರ ಸಂದರ್ಶನದಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದು. ಆಸಕ್ತರು ಜನವರಿ 23, 24 ರಂದು ಪೂರ್ವ ನೋಂದಣಿ ಮಾಡಿಕೊಳ್ಳಬಹುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್