ಬೈಕ್ ಕಳ್ಳರ ಬಂಧನ
ವಿಜಯಪುರ, 23 ಜನವರಿ (ಹಿ.ಸ.) : ಆ್ಯಂಕರ್ : ರಾಜ್ಯ ಹಾಗೂ ಹೊರ ರಾಜ್ಯದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ರಾಮ ದುಂಡಪ್ಪ ಅರಕೇರಿ, ಮಂಜುನ
ಬೈಕ್ ಕಳ್ಳರ ಬಂಧನ


ವಿಜಯಪುರ, 23 ಜನವರಿ (ಹಿ.ಸ.) :

ಆ್ಯಂಕರ್ : ರಾಜ್ಯ ಹಾಗೂ ಹೊರ ರಾಜ್ಯದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು.

ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ರಾಮ ದುಂಡಪ್ಪ ಅರಕೇರಿ, ಮಂಜುನಾಥ ಬಸವರಾಜ ಉಕ್ಕಲಿ, ಆಕಾಶ ರುದ್ರಯ್ಯ ಮಠಪತಿ ಬಂಧಿತ ಆರೋಪಿಗಳು. ಇನ್ನು ಆರೋಪಿಗಳು ವಿಜಯಪುರದ ಅಲಿಯಾಬಾದ್ ಬಳಿ ಸಂಶಯಾಸ್ಪದ ರೀತಿಯಲ್ಲಿ ಓಡಾಟ ನಡೆಸಿದ್ದಾಗ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿಗೈದು ಬಂಧಿಸಿದ್ದಾರೆ. ಸದರಿ 3ಜನ ಆರೋಪಿತರನ್ನು ಕುಲಂಕೂಶವಾಗಿ ವಿಚಾರಣೆ ಮಾಡಲಾಗಿ ಸದರಿಯವರು ಕೂಡಿಕೊಂಡು ರಾಜ್ಯ/ಹೊರ ರಾಜ್ಯಗಳಲ್ಲಿ ಮೋಟಾರ ಸೈಕಲ ಕಳ್ಳತನ ಮಾಡಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಒಪ್ಪಿಕೊಂಡಿದ್ದು, ಅದೇ ರೀತಿ ಈ ಹಿಂದೆ ತಾವು 3 ಜನ ಕೂಡಿಕೊಂಡು ಕಳ್ಳತನ ಮಾಡಿದ ಮೋಟಾರ ಸೈಕಲ್‌ಗಳನ್ನು ನಾಗಠಾಣ ಗ್ರಾಮದ ಅಕ್ಕಪಕ್ಕದ ಜಮೀನದಲ್ಲಿ ಇಟ್ಟಿರುವದಾಗಿ ಸಹ ಒಪ್ಪಿಕೊಂಡಿರುತ್ತಾರೆ. ಕಳ್ಳತನಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಒಟ್ಟು 5 ಪ್ರಕರಣಗಳು ದಾಖಲಾಗಿದ್ದು, ಸದರಿ ಪ್ರಕರಣಗಳಿಗೆ ಆರೋಪಿತರಿಂದ ಒಟ್ಟು 20 ಮೋಟಾರ ಸೈಕಲ್‌ಗಳನ್ನು ವಶಪಡಿಸಿಕೊಂಡಿದ್ದು, 7,00,000/ರೂ ಮೌಲ್ಯದ ಇದೆ ಎಂದರು. ಹೀಗೆ ಸನ್ 2024-25 ನೇ ಸಾಲಿನಲ್ಲಿ ವಿಜಯಪುರ ಗ್ರಾಮೀಣ ಉಪವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯವರು ಕೂಡಿಕೊಂಡು ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾದ 48 ಸ್ವತ್ತಿನ ಪ್ರಕರಣಗಳಲ್ಲಿ ಒಟ್ಟು 14 ಜನ ಅಂತರ ರಾಜ್ಯ ಹಾಗೂ ಅಂತರ ಜಿಲ್ಲಾ ಆರೋಪಿತರನ್ನು ಬಂಧಿಸಿ ಅವರಿಂದ ಅಂದಾಜು 65 ಲಕ್ಷ ರೂ. ಮೌಲ್ಯದ 426.2 ಗ್ರಾಂ ಬಂಗಾರದ ಆಭರಣಗಳನ್ನು ಮತ್ತು 20 ಲಕ್ಷ ರೂ ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ 02 ಕಾರುಗಳನ್ನು ಹಾಗೂ 39 ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಂಡಿದ್ದು, ಹೀಗೆ ಒಟ್ಟು 48 ಪ್ರಕರಣಗಳನ್ನು ಪತ್ತೆ ಹಚ್ಚಿ ಆರೋಪಿತರ ಕಡೆಯಿಂದ ಒಟ್ಟು 01 ಕೋಟಿ 17 ಲಕ್ಷದ 30 ಸಾವಿರ ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದೆ ಎಂದರು. ಸದರಿ ಪ್ರಕರಣಗಳ ಪತ್ತೆ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande