ಕಾರ್ಕಳದ ಮಿಯಾರು ಬಳಿ ಭೀಕರ ರಸ್ತೆ ಅಪಘಾತ
ಉಡುಪಿ, 23 ಜನವರಿ (ಹಿ.ಸ.) : ಆ್ಯಂಕರ್ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಸಮೀಪ ರಾಷ್ಟ್ರೀಯ ಹೆದ್ದಾರಿ–169ರಲ್ಲಿ ಖಾಸಗಿ ಬಸ್ ಹಾಗೂ ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ
ಕಾರ್ಕಳದ ಮಿಯಾರು ಬಳಿ ಭೀಕರ ರಸ್ತೆ ಅಪಘಾತ


ಉಡುಪಿ, 23 ಜನವರಿ (ಹಿ.ಸ.) :

ಆ್ಯಂಕರ್ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಸಮೀಪ ರಾಷ್ಟ್ರೀಯ ಹೆದ್ದಾರಿ–169ರಲ್ಲಿ ಖಾಸಗಿ ಬಸ್ ಹಾಗೂ ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ಕ್ರೂಸರ್ ವಾಹನದ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಘಟನಾ ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಯಿತು.

ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಅಪಘಾತದ ಮಾಹಿತಿ ಪಡೆದ ಕಾರ್ಕಳ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande