ಭಾರಿ ಹಿಮಪಾತ ; ಮಾತಾ ವೈಷ್ಣೋದೇವಿ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ
ಜಮ್ಮು, 23 ಜನವರಿ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ಭಾರಿ ಮಳೆ ಹಾಗೂ ಹಿಮಪಾತ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಪರಿಸ್ಥಿತಿಯ ತೀವ್ರತೆಯನ್ನು ಗಮನಿಸಿ ಆಡಳಿತವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಕತ್ರಾದಲ್ಲಿರುವ ಪ
ಭಾರಿ ಹಿಮಪಾತ ; ಮಾತಾ ವೈಷ್ಣೋದೇವಿ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ


ಜಮ್ಮು, 23 ಜನವರಿ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ಭಾರಿ ಮಳೆ ಹಾಗೂ ಹಿಮಪಾತ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಪರಿಸ್ಥಿತಿಯ ತೀವ್ರತೆಯನ್ನು ಗಮನಿಸಿ ಆಡಳಿತವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಕತ್ರಾದಲ್ಲಿರುವ ಪ್ರಸಿದ್ಧ ಮಾತಾ ವೈಷ್ಣೋದೇವಿ ದೇಗುಲಕ್ಕೆ ನಡೆಯುವ ತೀರ್ಥಯಾತ್ರೆಯನ್ನು ಭದ್ರತಾ ಕಾರಣಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಹವಾಮಾನ ವೈಪರೀತ್ಯ ಹಾಗೂ ಜಾರುವ ಮಾರ್ಗಗಳ ಅಪಾಯವನ್ನು ಮನಗಂಡು ಯಾತ್ರೆಯನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಯಾತ್ರಿಕರು ಕತ್ರಾದಲ್ಲಿಯೇ ಉಳಿಯುವಂತೆ ಸೂಚನೆ ನೀಡಲಾಗಿದ್ದು, ಮುಂದಿನ ಆದೇಶದವರೆಗೆ ಮೂಲ ಶಿಬಿರದಿಂದ ಭವನದತ್ತ ಸಾಗಲು ಯಾವುದೇ ಯಾತ್ರಿಕರಿಗೆ ಅನುಮತಿ ನೀಡಲಾಗುವುದಿಲ್ಲ.

ಹವಾಮಾನ ಪರಿಸ್ಥಿತಿ ಸುಧಾರಿಸಿದ ನಂತರ ಪರಿಸ್ಥಿತಿಯನ್ನು ಮರುಪರಿಶೀಲಿಸಿ ಯಾತ್ರೆ ಪುನರಾರಂಭಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಾತ್ರಿಕರು ಆಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande