ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮ ವೇದಿಕೆ ಮುಂಭಾಗ ಕಟೌಟ ಕುಸಿತ
ಹುಬ್ಬಳ್ಳಿ, 24 ಜನವರಿ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ನಡೆಯಲಿರುವ ಮನೆಗಳ ಹಂಚಿಕೆ ಕಾರ್ಯಕ್ರಮದ ವೇದಿಕೆ ಸಮೀಪ ಅಳವಡಿಸಲಾಗಿದ್ದ ಬೃಹತ್ ಕಟೌಟೊಂದು ಅಕಸ್ಮಿಕವಾಗಿ ಮುರಿದು ಬಿದ್ದ ಪರಿಣಾಮ ಸಂಭವಿಸಬಹುದಾದ ದೊಡ್ಡ ದುರಂತ ತಪ್ಪಿದೆ. ಕಾಂಗ್ರೆಸ್ ನಾಯಕರ ಭಾವಚಿತ್ರವಿದ್ದ ಈ ಬೃಹತ್
Cutout collapse


ಹುಬ್ಬಳ್ಳಿ, 24 ಜನವರಿ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ನಡೆಯಲಿರುವ ಮನೆಗಳ ಹಂಚಿಕೆ ಕಾರ್ಯಕ್ರಮದ ವೇದಿಕೆ ಸಮೀಪ ಅಳವಡಿಸಲಾಗಿದ್ದ ಬೃಹತ್ ಕಟೌಟೊಂದು ಅಕಸ್ಮಿಕವಾಗಿ ಮುರಿದು ಬಿದ್ದ ಪರಿಣಾಮ ಸಂಭವಿಸಬಹುದಾದ ದೊಡ್ಡ ದುರಂತ ತಪ್ಪಿದೆ.

ಕಾಂಗ್ರೆಸ್ ನಾಯಕರ ಭಾವಚಿತ್ರವಿದ್ದ ಈ ಬೃಹತ್ ಕಟೌಟ್‌ ಕುಸಿದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ವೇಳೆ ಕಾರ್ಯಕ್ರಮದ ಉಸ್ತುವಾರಿ ಹೊತ್ತಿದ್ದ ಕೆಲ ಅಧಿಕಾರಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೋಲಿಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande