
ಗದಗ, 24 ಜನವರಿ (ಹಿ.ಸ.)
ಆ್ಯಂಕರ್:
ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯಕ್ಕೆ ನಾಳೆ ರಜೆ ಘೋಷಿಸಲಾಗಿದೆ. ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನ ಸಮೀಪ ಕಳೆದ 9 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಉತ್ಖನನ ಕಾರ್ಯಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿದೆ.
ಉತ್ಖನನ ಕಾರ್ಯದಲ್ಲಿ ತೊಡಗಿದ್ದ ಕೂಲಿ ಕಾರ್ಮಿಕರು ಹಾಗೂ ಪುರಾತತ್ವ ಇಲಾಖೆ ಸಿಬ್ಬಂದಿಗಳಿಗೆ ನಾಳೆ ರಜೆ ನೀಡಲಾಗಿದೆ. ಈ ಕುರಿತು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೊಗೇರಿ ಮಾಹಿತಿ ನೀಡಿದ್ದಾರೆ.
ಇನ್ನೂ ಜನವರಿ 26ರಂದು ಗಣರಾಜ್ಯೋತ್ಸವ ದಿನದ ರಜೆ ಕುರಿತಂತೆ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಉತ್ಖನನ ಕಾರ್ಯದ ಮುಂದಿನ ಹಂತದ ಬಗ್ಗೆ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳು ಚರ್ಚಿಸಿ ನಿರ್ಧಾರ ಕೈಗೊಳ್ಳಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP