ಜನವರಿ 26 ಕ್ಕೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ನೌಕರರ ಸಂಘದ ನೂತನ ಕಟ್ಟಡ ಉದ್ಘಾಟನೆ
ಬಳ್ಳಾರಿ, 24 ಜನವರಿ (ಹಿ.ಸ.) ಆ್ಯಂಕರ್ : ಕರ್ನಾಟಕ ಗ್ರಾಮೀಣ ಬ್ಯಾಂಕ್‍ನ ನಿವೃತ್ತ ನೌಕರರ ಸಂಘದ ನೂತನ ಕಟ್ಟಡದ ಉದ್ಘಾಟನೆ ಮತ್ತು ಬ್ಯಾಂಕ್‍ನ ಸುವರ್ಣ ಮಹೋತ್ಸವವು ಜನವರಿ 26ರ ಬೆಳಗ್ಗೆ 10.30 ಕ್ಕೆ ಕಮ್ಮ ಭವನದಲ್ಲಿ ನಡೆಯಲಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ನೌಕರರ ವೆಲ್ಫೇರ್ ಅಸೋಸಿಯೇಷನ್
ಜನವರಿ 26 ಕ್ಕೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ನೌಕರರ ಸಂಘದ ನೂತನ ಕಟ್ಟಡ ಉದ್ಘಾಟನೆ


ಜನವರಿ 26 ಕ್ಕೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ನೌಕರರ ಸಂಘದ ನೂತನ ಕಟ್ಟಡ ಉದ್ಘಾಟನೆ


ಬಳ್ಳಾರಿ, 24 ಜನವರಿ (ಹಿ.ಸ.)

ಆ್ಯಂಕರ್ : ಕರ್ನಾಟಕ ಗ್ರಾಮೀಣ ಬ್ಯಾಂಕ್‍ನ ನಿವೃತ್ತ ನೌಕರರ ಸಂಘದ ನೂತನ ಕಟ್ಟಡದ ಉದ್ಘಾಟನೆ ಮತ್ತು ಬ್ಯಾಂಕ್‍ನ ಸುವರ್ಣ ಮಹೋತ್ಸವವು ಜನವರಿ 26ರ ಬೆಳಗ್ಗೆ 10.30 ಕ್ಕೆ ಕಮ್ಮ ಭವನದಲ್ಲಿ ನಡೆಯಲಿದೆ.

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ನೌಕರರ ವೆಲ್ಫೇರ್ ಅಸೋಸಿಯೇಷನ್ ಬಳ್ಳಾರಿ ಜಿಲ್ಲಾ ಗೌರವ ಅಧ್ಯಕ್ಷರಾದ ಗಣಪತಿ ಹೆಗಡೆ ಅವರು ಸುದ್ದಿಗಾರರಿಗೆ ಶನಿವಾರ ಮಾಹಿತಿ ನೀಡಿದ್ದು, ಗಾಂಧಿನಗರದ ಮುಖ್ಯ ರಸ್ತೆಯಲ್ಲಿ ಸಂಘದ ಕಚೇರಿಗೆ ಸ್ವಂತ ಕಟ್ಟಡವನ್ನು ಖರೀದಿಸಲಾಗಿದೆ. ಈ ಕಟ್ಟಡದಲ್ಲಿ ಸಂಘದ ಕಚೇರಿಯನ್ನು ಜನವರಿ 26ರ ಭಾನುವಾರ ಬೆಳಿಗ್ಗೆ 8.30 ಕ್ಕೆ ಉದ್ಘಾಟನೆ ಮಾಡಲಾಗುತ್ತದೆ. ನಂತರ, ಕಮ್ಮ ಭವನದಲ್ಲಿ ಸುವರ್ಣ ಮಹೋತ್ಸವ ನಡೆಯಲಿದೆ ಎಂದರು.

ಗ್ರಾಮೀಣ ಬ್ಯಾಂಕ್ ಗಳ ರಾಷ್ಟ್ರೀಯ ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ ಅಬ್ದುಲ್ ಸಯದ್ ಖಾನ್, ಅಧಿಕಾರಿಗಳ ಸಂಘದ ಪ್ರದಾನ ಕಾರ್ಯದರ್ಶಿ ಕಿರ್ತಿರಾಜ್ ಹಿಡಕಲ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ. ವೆಂಕಟರಾಮಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ಎಂ. ಮಹಾಂತಯ್ಯ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande