
ಗದಗ, 24 ಜನವರಿ (ಹಿ.ಸ.)
ಆ್ಯಂಕರ್:
ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯಕ್ಕೆ ಶಾಸಕ ಸಿಸಿ ಪಾಟೀಲ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉತ್ಖನನ ನಡೆಯುತ್ತಿರುವ ಸ್ಥಳದಲ್ಲಿ ಕಲ್ಲಿನ ಅವಶೇಷಗಳು ಪತ್ತೆಯಾಗಿದ್ದು, ಕಾರ್ಯವನ್ನು ಯಾವುದೇ ಅಡೆತಡೆಯಿಲ್ಲದೆ ಮುಂದುವರೆಸಲಾಗುವುದು ಎಂದು ಅವರು ತಿಳಿಸಿದರು.
ಉತ್ಖನನ ಕಾರ್ಯಕ್ಕೆ ಸರ್ಕಾರದ ಸಂಪೂರ್ಣ ಬೆಂಬಲ ಸಿಗಲಿದೆ ಎಂದು ಭರವಸೆ ನೀಡಿದ ಶಾಸಕ ಸಿಸಿ ಪಾಟೀಲ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂಬುದೇ ಸರ್ಕಾರದ ಉದ್ದೇಶ ಎಂದು ಸ್ಪಷ್ಟಪಡಿಸಿದರು. ಉತ್ಖನನಕ್ಕೆ ಸಂಬಂಧಿಸಿದ ಮುಂದಿನ ರೂಪುರೇಷೆಗಳ ಕುರಿತು ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಅವರು, ಸ್ಥಳಾಂತರದ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ. ಈ ಕುರಿತು ಜನರು ಭಯಭೀತರಾಗಬೇಕಾದ ಅಗತ್ಯವಿಲ್ಲ. ಅನಾವಶ್ಯಕ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಇನ್ನೂ ಇದೇ ತಿಂಗಳ 26ರಂದು ಸಂಸದ ಪಿಸಿ ಗದ್ದಿಗೌಡರ್ ಅವರು ಉತ್ಖನನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಶಾಸಕ ಮಾಹಿತಿ ನೀಡಿದರು. ಉತ್ಖನನ ಹಿನ್ನೆಲೆಯಲ್ಲಿ ಬಾಧಿತವಾಗಿರುವ ರಿತ್ತಿ ಕುಟುಂಬಕ್ಕೆ ಸೈಟ್ ನೀಡಲಾಗಿದ್ದು, ಮನೆ ನಿರ್ಮಾಣಕ್ಕೂ ಸರ್ಕಾರದಿಂದ ಅಗತ್ಯ ಸಹಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP