ನಾಳೆ ರಾಷ್ಟ್ರೀಯ ಮತದಾರರ ದಿನಾಚರಣೆ
ವಿಜಯಪುರ, 24 ಜನವರಿ (ಹಿ.ಸ.) : ಆ್ಯಂಕರ್ : ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ನಾಳೆ 25 ರಂದು ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ 16
ನಾಳೆ ರಾಷ್ಟ್ರೀಯ ಮತದಾರರ ದಿನಾಚರಣೆ


ವಿಜಯಪುರ, 24 ಜನವರಿ (ಹಿ.ಸ.) :

ಆ್ಯಂಕರ್ : ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ನಾಳೆ 25 ರಂದು ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ನಾಳೆ ಬೆಳಿಗ್ಗೆ 10ಕ್ಕೆ ನಡೆಯುವ ಕಾರ್ಯಕ್ರಮವನ್ನು

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ.ಅವರು ಉದ್ಘಾಟಿಸಲಿದ್ದು, ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ,ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ

ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧನೆ, ಸಾಂಕೇತಿಕವಾಗಿ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಣೆ, ಅತ್ಯುತ್ತಮ ಬಿ.ಎಲ್.ಒ ಅವರಿಗೆ ಸನ್ಮಾನ,ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ, ಮತದಾರರ ಹಕ್ಕು ಮತ್ತು ಅದರ ಮಹತ್ವ‌ ಕುರಿತ ವಿಶೇಷ ಉಪನ್ಯಾಸ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಔದ್ರಾಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande