
ಬೆಂಗಳೂರು, 24 ಜನವರಿ (ಹಿ.ಸ.) :
ಆ್ಯಂಕರ್ : 77ನೇ ಗಣರಾಜ್ಯೋತ್ಸವದ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಸಾರ್ವಜನಿಕರಿಗಾಗಿ ಆನ್‌ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಪರೇಡ್‌ನಲ್ಲಿ 516 ಮಂದಿ ಭಾಗವಹಿಸಲಿದ್ದು, ಭದ್ರತೆಗಾಗಿ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರ್ಯಕ್ರಮವು ಬೆಳಗ್ಗೆ 8:58ಕ್ಕೆ ಆರಂಭವಾಗಲಿದ್ದು, ಸಾರ್ವಜನಿಕರು ಬೆಳಗ್ಗೆ 8 ಗಂಟೆಯೊಳಗೆ ಆಗಮಿಸುವುದು ಕಡ್ಡಾಯವಾಗಿದೆ.
ಜನವರಿ 26ರಂದು ಬೆಳಗ್ಗೆ 8:30ರಿಂದ 10:30ರವರೆಗೆ ಕಬ್ಬನ್ ರಸ್ತೆ ಸೇರಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಪಾರ್ಕಿಂಗ್ ನಿಷೇಧ ಜಾರಿಯಲ್ಲಿರುತ್ತದೆ. ಸೇವಾಸಿಂಧು ವೆಬ್‌ಸೈಟ್ ಮೂಲಕ ಇ-ಪಾಸ್ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa