
ಯಾದಗಿರಿ, 24 ಜನವರಿ (ಹಿ.ಸ.) :
ಆ್ಯಂಕರ್ : “ಮನರೇಗಾ ಉಳಿಸಿ, ಗ್ರಾಮಗಳನ್ನು ರಕ್ಷಿಸಿ” ಆಂದೋಲನದ ಅಂಗವಾಗಿ ಯಾದಗಿರಿ ಜಿಲ್ಲಾ ಮಹಿಳಾ ಕಾಂಗ್ರೆಸ್, ಬೀದರ್ ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಬಳ್ಳಾರಿ ಗ್ರಾಮೀಣ ವಿಭಾಗದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಮತ್ತು ಸದಸ್ಯರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ನೀತಿಗಳಿಂದ ಗ್ರಾಮೀಣ ಉದ್ಯೋಗ ಭದ್ರತೆ ಯೋಜನೆ ಮನರೇಗಾ ದುರ್ಬಲಗೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಗ್ರಾಮೀಣ ಜನರ ಜೀವನೋಪಾಯಕ್ಕೆ ತೀವ್ರ ಹೊಡೆತ ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮನರೇಗಾ ಯೋಜನೆಯನ್ನು ಮರು ಜಾರಿಗೊಳಿಸಲು ಪ್ರತಿಭಟನಾಕಾರರು ಆಗ್ರಹಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa