
ತುಮಕೂರು, 24 ಜನವರಿ (ಹಿ.ಸ.):
ಆ್ಯಂಕರ್:
ತುಮಕೂರಿನ ಹೆಗ್ಗೆರೆಯಲ್ಲಿ ಇಂದು ತುಮಕೂರು ನಗರದ ಬಟವಾಡೆಯಿಂದ ಮಲ್ಲಸಂದ್ರದವರೆಗೆ (12.30 ಕಿ.ಮೀ) ರಾಷ್ಟ್ರೀಯ ಹೆದ್ದಾರಿ–206ರಲ್ಲಿ ವೈಟ್ ಟ್ಯಾಪಿಂಗ್ ಹಾಗೂ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಸುರೇಶ್ ಗೌಡ, ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಹೆಬ್ಬಾಕ, ಜಿಲ್ಲಾಧಿಕಾರಿ ಶುಭ್ ಕಲ್ಯಾಣ್, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa