
ಬೆಂಗಳೂರು, 24 ಜನವರಿ (ಹಿ.ಸ.):
ಆ್ಯಂಕರ್:
ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಓಕಳಿಪುರಂ ವಾರ್ಡ್–63ರ ನಾಗೇಂದ್ರ ಗಾರ್ಡನ್ 2ನೇ ಕ್ರಾಸ್‌ನಲ್ಲಿ ನೂತನ ಸ್ಯಾನಿಟರಿ ಪೈಪುಗಳ ಅಳವಡಿಕೆ ಕಾಮಗಾರಿಗೆ ಸಚಿವ ದಿನೇಶ್ ಗುಂಡೂರಾವ್ ಅವರು ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಇಂದು ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಕಾಮಗಾರಿ ಶೀಘ್ರ ಹಾಗೂ ಗುಣಮಟ್ಟದಿಂದ ಪೂರ್ಣಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಯೋಜನೆಯಿಂದ ಸ್ಥಳೀಯ ನಿವಾಸಿಗಳ ಬಹುಕಾಲದ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗುತ್ತಿಗೆದಾರ ಮಾಧವನ್ ಎ, ಕಾಂಗ್ರೆಸ್ ಮುಖಂಡರಾದ ಸಂಪತ್, ಪ್ರಭಾಕರ್, ಮಹಿಳಾ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa