ಹೆಣ್ಣುಮಕ್ಕಳ ಶೋಷಣೆ ವಿರುದ್ಧ ದನಿ ಎತ್ತಬೇಕಾದ ಸಮಯ : ಸಿದ್ದರಾಮಯ್ಯ
ಬೆಂಗಳೂರು, 24 ಜನವರಿ (ಹಿ.ಸ.) : ಆ್ಯಂಕರ್ : ಆಧುನಿಕ ಯುಗದಲ್ಲಿಯೂ ಸಹ ಹೆಣ್ಣುಮಕ್ಕಳು ಮಾನಸಿಕ ಹಾಗೂ ದೈಹಿಕ ಶೋಷಣೆಗೆ ಒಳಗಾಗಿ, ಸಮಾನ ಅವಕಾಶಗಳಿಂದ ವಂಚಿತರಾಗಿ ಬದುಕು ಸಾಗಿಸುತ್ತಿರುವುದು ಆತ್ಮವಿಮರ್ಶೆಗೆ ದಾರಿ ಮಾಡಿಕೊಡಬೇಕಾದ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಷ್ಟ
Cm


ಬೆಂಗಳೂರು, 24 ಜನವರಿ (ಹಿ.ಸ.) :

ಆ್ಯಂಕರ್ : ಆಧುನಿಕ ಯುಗದಲ್ಲಿಯೂ ಸಹ ಹೆಣ್ಣುಮಕ್ಕಳು ಮಾನಸಿಕ ಹಾಗೂ ದೈಹಿಕ ಶೋಷಣೆಗೆ ಒಳಗಾಗಿ, ಸಮಾನ ಅವಕಾಶಗಳಿಂದ ವಂಚಿತರಾಗಿ ಬದುಕು ಸಾಗಿಸುತ್ತಿರುವುದು ಆತ್ಮವಿಮರ್ಶೆಗೆ ದಾರಿ ಮಾಡಿಕೊಡಬೇಕಾದ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಹೆಣ್ಣುಭ್ರೂಣ ಹತ್ಯೆ, ಬಾಲ್ಯವಿವಾಹ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಸೇರಿದಂತೆ ಸಮಾಜವನ್ನು ಕಾಡುತ್ತಿರುವ ಪಿಡುಗುಗಳ ವಿರುದ್ಧ ಈಗಲೇ ದನಿ ಎತ್ತದಿದ್ದರೆ, ಮುಂದೆ ಅವಕಾಶವೇ ಸಿಗುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಹೆಣ್ಣುಮಕ್ಕಳ ಶಿಕ್ಷಣ, ಉದ್ಯೋಗ ಹಾಗೂ ಘನತೆಯ ಬದುಕಿನ ಕನಸುಗಳಿಗೆ ಬೆಂಬಲವಾಗಿ ನಿಂತು, ಅವರನ್ನು ಸಮಾಜದ ಅಮೂಲ್ಯ ಆಸ್ತಿಯಾಗಿ ರೂಪಿಸುವ ಹೊಣೆ ಎಲ್ಲರ ಮೇಲೆಯೇ ಇದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಮೂಲಕ ಕರ್ನಾಟಕದಲ್ಲಿ ಸ್ತ್ರೀಸಬಲೀಕರಣದ ಹೊಸ ಯುಗ ಆರಂಭಗೊಂಡಿದ್ದು, ಈ ಯೋಜನೆಗಳು ವಿಶ್ವಪ್ರಶಂಸೆಗೆ ಪಾತ್ರವಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಹೆಣ್ಣುಮಕ್ಕಳ ಸುರಕ್ಷತೆ ಮತ್ತು ಸಬಲೀಕರಣದ ಮೂಲಕ ಈ ದಿನವನ್ನು ಕರ್ನಾಟಕ ಅರ್ಥಪೂರ್ಣವಾಗಿ ಆಚರಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande