ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಪುಸ್ತಕ ಮೇಳ
ಬಳ್ಳಾರಿ, 28 ಜನವರಿ (ಹಿ.ಸ.) : ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕೇಂದ್ರ ಗ್ರಂಥಾಲಯದಲ್ಲಿ ಜ.28 ರಿಂದ 30 ರ ವರೆಗೆ ಮೂರು ದಿನಗಳ ಕಾಲ ಆಯೋಜಿಸಿರುವ ಪುಸ್ತಕ ಮೇಳಕ್ಕೆ ವಿವಿಯ ಕುಲಪತಿ ಪ್ರೊ.ಎಂ ಮುನಿರಾಜು ಅವರು ಚಾಲನೆ ನೀಡಿದ್ದಾರೆ. ಪುಸ್ತಕ ಪ್ರದರ್ಶನದಲ್ಲಿ 13 ವಿವ
Book fair at the university


ಬಳ್ಳಾರಿ, 28 ಜನವರಿ (ಹಿ.ಸ.) :

ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕೇಂದ್ರ ಗ್ರಂಥಾಲಯದಲ್ಲಿ ಜ.28 ರಿಂದ 30 ರ ವರೆಗೆ ಮೂರು ದಿನಗಳ ಕಾಲ ಆಯೋಜಿಸಿರುವ ಪುಸ್ತಕ ಮೇಳಕ್ಕೆ ವಿವಿಯ ಕುಲಪತಿ ಪ್ರೊ.ಎಂ ಮುನಿರಾಜು ಅವರು ಚಾಲನೆ ನೀಡಿದ್ದಾರೆ.

ಪುಸ್ತಕ ಪ್ರದರ್ಶನದಲ್ಲಿ 13 ವಿವಿಧ ಪುಸ್ತಕ ಮಳಿಗೆಗಳು ಭಾಗವಹಿಸಿದ್ದು, ಪುಸ್ತಕ ಪ್ರದರ್ಶನವು ಬೆಳಿಗ್ಗೆ 10 ರಿಂದ ಸಂಜೆ 5.30 ರ ವರೆಗೆ ಮೂರು ದಿನಗಳವರೆಗೆ ಜರುಗಲಿದೆ. ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ವೇಳೆ ಕುಲಸಚಿವ ಪ್ರೊ.ತಿಪ್ಪೇರುದ್ರಪ್ಪ ಜೆ., ಗ್ರಂಥಪಾಲಕ ಡಾ.ಮಾರಣ್ಣ ಓ ಸೇರಿದಂತೆ ವಿವಿಯ ನಿಕಾಯಗಳದ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande