
ಬಳ್ಳಾರಿ, 28 ಜನವರಿ (ಹಿ.ಸ.) :
ಆ್ಯಂಕರ್ : ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ಹೆಣ್ಣಿಗೆ ಸಮಾನ ಅವಕಾಶ ಮತ್ತು ಪೆÇ್ರೀತ್ಸಾಹ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಮೊದಲ ಬಾರಿಗೆ 2008 ರಲ್ಲಿ ಆಚರಣೆ ಮಾಡಲಾಯಿತು. ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಚರಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಮಹಿಳೆಯರಲ್ಲಿ ಶಿಕ್ಷಣದ ಮಹತ್ವ, ಆರೋಗ್ಯ ಮತ್ತು ಪ್ರಾಮುಖ್ಯತೆಯನ್ನು ಉತ್ತೇಜಿಸುವುದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಣೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಲಿಂಗಾನುಪಾತ ಹೆಣ್ಣು ಮಕ್ಕಳ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣ ನಿರ್ಮಿಸಿದ್ದು, ಹೆಣ್ಣು ಮಗವನ್ನು ಉಳಿಸುವುದು, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದರ ಕುರಿತು ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ವಿರೇಂದ್ರ ಕುಮಾರ್, ಡಿಎನ್‍ಒ ಗಿರೀಶ್, ಆರೋಗ್ಯ ನಿರೀಕ್ಷಣಾಧಿಕಾರಿ ವಿರುಪಾಕ್ಷಿ, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗೋಪಾಲ್ ಕೆ.ಹೆಚ್., ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಫ್ರಾನ್ಸಿಸ್, ಮಹೇಶ್, ಬಿಪಿಎಮ್ ಮೇಘರಾಜ್, ಓಬಳರೆಡ್ಡಿ, ವೀರೇಶ್ ಸೇರಿದಂತೆ ಪ್ರಾಥಮಿಕ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾಕಾರ್ಯಕರ್ತೆಯರು ಸೇರಿದಂತೆ ಇತರರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್