ಯಶಸ್ವಿಯಾಗಿ ಜರುಗಿದ ಉಚಿತ ನೇತ್ರ ತಪಾಸಣಾ ಶಿಬಿರ
ವಿಜಯಪುರ, 28 ಜನವರಿ (ಹಿ.ಸ.) : ಆ್ಯಂಕರ್ : ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2026 ಅಂಗವಾಗಿ ಹಮ್ಮಿಕೊಂಡ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರ
ಉಚಿತ


ವಿಜಯಪುರ, 28 ಜನವರಿ (ಹಿ.ಸ.) :

ಆ್ಯಂಕರ್ : ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2026 ಅಂಗವಾಗಿ ಹಮ್ಮಿಕೊಂಡ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಸಂತೋಷಗೌಡ ಬಿ.ಪಾಟೀಲ, ದತ್ತಾತ್ರೇಯ ಹೊಸಮಠ, ಅಲ್-ಅಮೀನ್ ವೈದ್ಯಕೀಯ ಕಾಲೇಜಿನ ಡಾ.ಆಶ್ಪಾಕ ಅಹ್ಮದ ಕಕ್ಕೇರಿ, ಹಿರಿಯ ಮೋಟಾರು ವಾಹನ ನಿರೀಕ್ಷಕ ಗೋವಿಂದ ಎಲ್.ರಾಠೋಡ ಭಾಗವಹಿಸಿದ್ದರು. ಈ ಶಿಬಿರದಲ್ಲಿ 101 ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣೆ ನಡೆಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande