
ಬಳ್ಳಾರಿ, 28 ಜನವರಿ (ಹಿ.ಸ.) :
ಆ್ಯಂಕರ್ : ನಗರದ ರೈಲ್ವೇ ನಿಲ್ದಾಣ ಎದುರುಗಡೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಳ್ಳಾರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಧ್ಯಸ್ಥಿಕೆ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ನೂತನ ಕಟ್ಟಡವನ್ನು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಟಿ.ಜಿ ಶಿವಶಂಕರೇಗೌಡ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ. ಶಾಂತಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿ ಮಲ್ಲಿಕಾರ್ಜುನ ಈಶ್ವರಪ್ಪ ಕಮತಗಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ, ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾದ ಕೆ.ಕೋಟೇಶ್ವರ ರಾವ್, ಜೆ.ಎಂ. ಅನಿಲ್ ಕುಮಾರ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ಇತರರು ಉಪಸ್ಥಿತರಿರುವರು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್