
ಹಾವೇರಿ, 28 ಜನವರಿ (ಹಿ.ಸ.) :
ಆ್ಯಂಕರ್ : ಸಂಪೂರ್ಣ ಸಾಮಾಜಿಕ ನ್ಯಾಯ ದೊರೆಯಬೇಕೆಂದರೆ ಶೇ 50 ರ ಮೀಸಲಾತಿ ಹೋಗಬೇಕು. ಆಗ ಮಾತ್ರ ಎಲ್ಲರಿಗೂ ಸಂಪೂರ್ಣ ನ್ಯಾಯ ಸಿಗುತ್ತದೆ. ಆ ಕಾರಣಕ್ಕಾಗಿಯೇ ನಾನು ಎಸ್ಸಿ ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಹಾವೇರಿ ಜಿಲ್ಲೆಯ ಭಾರತೀಯ ಜನತಾ ಪಕ್ಷದ ವತಿಯಿಂದ ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಿದ ತಮ್ಮ 66 ನೇಯ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನನ್ನ ರಾಜಕೀಯ ಪಯಣದಲ್ಲಿ ಹೊಸ ಆಯಾಮವನ್ನು ತಾವೆಲ್ಲರೂ ಸೇರಿ ಹುಟ್ಟು ಹಾಕಿ ಬೆಂಬಲವನ್ನು ಕೊಟ್ಟು ನನಗೆ ಅವಕಾಶ ಕೊಟ್ಟು ಹಾವೇರಿ ಜಿಲ್ಲೆಯ ಪ್ರತಿ ಗ್ರಾಮದಿಂದ ಹಿಡಿದು ಎಲ್ಲರೂ ನನಗೆ ಬೆಂಬಲಕೊಟ್ಟಿರುವದಕ್ಕೆ ಧನ್ಯವಾದಗಳು. ನನಗೆ ಪ್ರೀತಿ ವಿಶ್ವಾಸ ಕೊಟ್ಟಿರುವ ಹಾವೇರಿ ಜಿಲ್ಲೆಯ ಮಹಾ ಜನತೆಗೆ ಕೋಟಿ ಕೋಟಿ ಧನ್ಯವಾದಗಳು, ಯಾವುದೋ ಋಣಾನು ಬಂಧ ಈ ಬಾರಿ ಹಾವೇರಿ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಸೇರಿ ನನ್ನನ್ನು ಗೆಲಿಸಿದ್ದೀರಿ ಅತ್ಯಂತ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa