
ಡರ್ಬನ್, 30 ಜನವರಿ (ಹಿ.ಸ.) :
ಆ್ಯಂಕರ್ : ದಕ್ಷಿಣ ಆಫ್ರಿಕಾದ ಕ್ವಾಜುಲು–ನಟಾಲ್ ಪ್ರಾಂತ್ಯದ ಡರ್ಬನ್ ಸಮೀಪ ಟ್ರಕ್ ಮತ್ತು ಮಿನಿಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮಗು ಸೇರಿ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯ ಸಾರಿಗೆ ಇಲಾಖೆ ಅಧಿಕಾರಿ ಸಿಬೊನಿಸೊ ಡುಮಾ ಮೃತಪಟ್ಟವರ ಸಂಖ್ಯೆ 11 ಎಂದು ದೃಢಪಡಿಸಿದ್ದು, ಗಾಯಾಳುಗಳಲ್ಲಿ ಮಿನಿಬಸ್ ಚಾಲಕರೂ ಸೇರಿದ್ದಾರೆ ಎಂದು ತಿಳಿಸಿದ್ದಾರೆ.
ಅಪಘಾತದ ಬಳಿಕ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯ ನಡೆಸಿದರು. ಮಿನಿಬಸ್‌ನಲ್ಲಿ ಇನ್ನೂ ಕೆಲವರು ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಜೋಹಾನ್ಸ್‌ಬರ್ಗ್‌ನಲ್ಲಿ ಕಳೆದ ವಾರ ನಡೆದ ಅಪಘಾತದಲ್ಲಿ 14 ಶಾಲಾ ಮಕ್ಕಳು ಮೃತಪಟ್ಟ ಘಟನೆಯ ಬಳಿಕ ಈ ದುರ್ಘಟನೆ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa