
ಧಾರವಾಡ, 04 ಜನವರಿ (ಹಿ.ಸ.) :
ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಆಯುಕ್ತರ ಕಚೇರಿ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಇವರ ಸಹಯೋಗದೊಂದಿಗೆ 2025-26 ನೇ ಸಾಲಿ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಜನೆವರಿ 06, 2026 ರಂದು ಬೆಳಿಗ್ಗೆ 9:30 ಗಂಟೆಗೆ ಧಾರವಾಡ ರಾಯಾಪುರನ ಎಸ್.ಕೆ.ಡಿ.ಆರ್.ಡಿ.ಪಿ ಬಿ.ಸಿ ಟ್ರಸ್ಟ್‍ನ ಜ್ಞಾನವಿಕಾಸ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa