ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ನಿಗದಿ
ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ


ಹಾಸನ, 05 ಜನವರಿ (ಹಿ.ಸ.) :

ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಬೌದ್ಧ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಮಂಜೂರಾತಿಗಾಗಿ ನಿಗದಿಪಡಿಸಿದ್ದ ಅವಧಿಯನ್ನು ಜ.15ಕ್ಕೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಲ್ಲಾ ಅಗತ್ಯ ದಾಖಲೆಗಳ ಸಹಿತ ಸಂಬಂಧಿಸಿದ ಕಾಲೇಜು ಪ್ರಾಂಶುಪಾಲರಿಂದ ದೃಢೀಕರಿಸಿ ಆನ್ಲೈನ್ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿ ಮತ್ತು ಷರತ್ತುಗಳಿಗಾಗಿ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಅಧಿಕೃತ ವೆಬ್ಸೈಟ್ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande