ಕೋಗಿಲು ಉಳಿಸಿ, ಅಕ್ರಮ ವಲಸಿಗರನ್ನು ತೊಲಗಿಸಿ : ಬಿಜೆಪಿ
ಕಂಟ್ರಿ
Bjp protest


ಬೆಂಗಳೂರು, 05 ಜನವರಿ (ಹಿ.ಸ.) :

ಆ್ಯಂಕರ್ : “ಕೋಗಿಲು ಉಳಿಸಿ – ಅಕ್ರಮ ವಲಸಿಗರನ್ನು ತೊಲಗಿಸಿ” ಎಂಬ ಘೋಷವಾಕ್ಯದೊಂದಿಗೆ ಬಾಗಲೂರು ಮುಖ್ಯ ರಸ್ತೆಯ ಕಂಟ್ರಿ ಕ್ಲಬ್ ಸಮೀಪ ಭಾರತೀಯ ಜನತಾ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಕೋಗಿಲು ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ವಸತಿ, ಅಕ್ರಮ ವಲಸೆ ಹಾಗೂ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ನಗರದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸತ್ಯಶೋಧನಾ ಸಮಿತಿಯ ಸದಸ್ಯರು ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷರು ಭಾಗವಹಿಸಿದ್ದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ನಾಯಕರು, ಕೋಗಿಲು ಸೇರಿದಂತೆ ಉತ್ತರ ಬೆಂಗಳೂರು ಭಾಗದಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿರುವುದು ಕಾನೂನು ಸುವ್ಯವಸ್ಥೆ, ನಾಗರಿಕರ ಸುರಕ್ಷತೆ ಹಾಗೂ ಮೂಲಸೌಕರ್ಯಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು. ಈ ಸಮಸ್ಯೆಯನ್ನು ನಿಯಂತ್ರಿಸಲು ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.

ಕೋಗಿಲು ಪ್ರದೇಶವನ್ನು ಉಳಿಸಲು ಹಾಗೂ ಅಕ್ರಮ ವಸತಿಗಳನ್ನು ತೆರವುಗೊಳಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಇಲ್ಲದಿದ್ದರೆ ಬಿಜೆಪಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದು ಎಚ್ಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande