

ಮೈಸೂರು, 06 ಜನವರಿ (ಹಿ.ಸ.) :
ಆ್ಯಂಕರ್ : ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು.
ಇದೇ ವೇಳೆ ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು.
ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ ಎಂದ ಮುಖ್ಯಮಂತ್ರಿಗಳು ಜನರ ಕೆಲಸ ಮಾಡುವುದು ಖುಷಿಯ ಸಂಗತಿ ಎಂದರು.
ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದರು.
ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa