ಹುಬ್ಬಳ್ಳಿ ಘಟನೆ ; ಸರಕಾರದ ವಿರುದ್ಧ ಅಶೋಕ ಆಕ್ರೋಶ
ಬೆಂಗಳೂರು, 07 ಜನವರಿ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್‌ ಪಕ್ಷದ ನಗರ ಪಾಲಿಕೆ ಸದಸ್ಯೆ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿಯ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿರುವ ಅಮಾನುಷ ಘಟನೆ ನಡೆದಿದ್ದು, ಈ ಲಜ್ಜೆಗೆಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ ಬಂದಾಗಿನ
ಹುಬ್ಬಳ್ಳಿ ಘಟನೆ ; ಸರಕಾರದ ವಿರುದ್ಧ ಅಶೋಕ ಆಕ್ರೋಶ


ಬೆಂಗಳೂರು, 07 ಜನವರಿ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್‌ ಪಕ್ಷದ ನಗರ ಪಾಲಿಕೆ ಸದಸ್ಯೆ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿಯ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿರುವ ಅಮಾನುಷ ಘಟನೆ ನಡೆದಿದ್ದು, ಈ ಲಜ್ಜೆಗೆಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಎಗ್ಗಿಲ್ಲದೆ ನಡೆಯುತ್ತಿರುವ ದ್ವೇಷ ರಾಜಕಾರಣಕ್ಕೆ ಮತ್ತೊಂದು ಉದಾಹರಣೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ದಿನ ಬೆಳಗಾದರೆ ವಿಪಕ್ಷ ಶಾಸಕರ ಮೇಲೆ ಕೊಲೆ ಯತ್ನ, ವಿಪಕ್ಷ ಕಾರ್ಯಕರ್ತರ ಮೇಲೆ ಹಲ್ಲೆ, ದೌರ್ಜನ್ಯ ಇವೆಲ್ಲವೂ ಸರ್ವೇ ಸಾಮಾನ್ಯವಾಗುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande