ದೆಹಲಿ : ಅತಿಶಿ ಸದಸ್ಯತ್ವ ರದ್ದತಿಗೆ ವಿಧಾನ ಸಭಾ ಸ್ಪೀಕರ್‌ಗೆ ಸಚಿವರ ಪತ್ರ
ಪ್ರತಿ
Delhi


ನವದೆಹಲಿ, 07 ಜನವರಿ (ಹಿ.ಸ.) :

ಆ್ಯಂಕರ್ : ದೆಹಲಿ ವಿಧಾನ ಸಭೆಯ ಪ್ರತಿ ಪಕ್ಷದ ನಾಯಕಿ ಅತಿಶಿ ಅವರ ಶಾಸಕರ ಸ್ಥಾನವನ್ನು ರದ್ದುಗೊಳಿಸಬೇಕು ಹಾಗೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿ ದೆಹಲಿ ಸಂಪುಟ ಸಚಿವರು ವಿಧಾನ ಸಭಾ ಸ್ಪೀಕರ್‌ಗೆ ಅಧಿಕೃತವಾಗಿ ಪತ್ರ ಸಲ್ಲಿಸಿದ್ದಾರೆ.

ಈ ಕುರಿತು ಬುಧವಾರ ದೆಹಲಿ ವಿಧಾನ ಸಭೆ ಆವರಣದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಚಿವರಾದ ಪರ್ವೇಶ್ ಸಾಹಿಬ್ ಸಿಂಗ್ ಮತ್ತು ಮಂಜಿಂದರ್ ಸಿಂಗ್ ಸಿರ್ಸಾ, ಸಿಖ್ ಗುರುಗಳಿಗೆ ಅವಮಾನ ಮಾಡಿದ ಆರೋಪ ಗಂಭೀರವಾಗಿದ್ದು, ಇಂತಹ ಕೃತ್ಯಗಳಿಗೆ ಕಠಿಣ ಕಾನೂನು ಕ್ರಮ ಅಗತ್ಯವಿದೆ ಎಂದು ಹೇಳಿದ್ದಾರೆ. ಸಿಖ್ ಧರ್ಮಗುರುಗಳನ್ನು ಅವಮಾನಿಸುವವರಿಗೆ ತಿಹಾರ್ ಜೈಲು ಸೂಕ್ತ ಸ್ಥಳ ಎಂದು ಸಚಿವರು ಕಟುವಾಗಿ ಪ್ರತಿಕ್ರಿಯಿಸಿದರು.

ಈ ವಿಚಾರವನ್ನು ಖಂಡಿಸಿ ಹಾಗೂ ಅತಿಶಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಶಾಸಕರು ದೆಹಲಿ ವಿಧಾನಸಭೆಯ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸಿದರು. ಈ ಬೆಳವಣಿಗೆ ದೆಹಲಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande