
ನವದೆಹಲಿ, 07 ಜನವರಿ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಸಂಭಾಷಣೆ ನಡೆಸಿ, ಭಯೋತ್ಪಾದನೆಯ ವಿರುದ್ಧ ಒಟ್ಟಾಗಿ ಹೋರಾಡುವ ಮತ್ತು ಭಾರತ–ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
ಇಬ್ಬರೂ ನಾಯಕರು ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು, 2026ರಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಹಂಚಿಕೆಯ ಆದ್ಯತೆಗಳ ಕುರಿತು ಚರ್ಚಿಸಿದರು. ಭಯೋತ್ಪಾದನೆಯ ಎಲ್ಲಾ ರೂಪಗಳ ವಿರುದ್ಧ ಶೂನ್ಯ ಸಹಿಷ್ಣುತಾ ನೀತಿಯನ್ನು ಸ್ಪಷ್ಟಪಡಿಸಿದರು.
ಗಾಜಾ ಶಾಂತಿ ಯೋಜನೆಯ ಬಗ್ಗೆ ನೆತನ್ಯಾಹು ಮಾಹಿತಿ ನೀಡಿದ್ದು, ಈ ಪ್ರದೇಶದಲ್ಲಿ ನ್ಯಾಯಯುತ ಹಾಗೂ ಶಾಶ್ವತ ಶಾಂತಿಗೆ ಭಾರತದ ಬೆಂಬಲವಿದೆ ಎಂದು ಮೋದಿ ಪುನರುಚ್ಚರಿಸಿದರು. ಪ್ರಾದೇಶಿಕ ಪರಿಸ್ಥಿತಿ, ಇಂಧನ ಭದ್ರತೆ ಮತ್ತು ಪಶ್ಚಿಮ ಏಷ್ಯಾದಲ್ಲಿರುವ ಭಾರತೀಯರ ಸುರಕ್ಷತೆಯ ಕುರಿತು ಚರ್ಚೆ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa