
ಹುಬ್ಬಳ್ಳಿ, 07 ಜನವರಿ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿರುವ ಬಗ್ಗೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುಜಾತ ಹಂಡೆ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಲು ಹೋಗಿದ್ದ ಸಂದರ್ಭದಲ್ಲಿ ಮಹಿಳೆಯೇ ಸ್ವತಃ ವಿವಸ್ತ್ರಗೊಂಡು ಮಹಿಳಾ ಪೊಲೀಸರನ್ನು ಕಚ್ಚಿದ್ದಾರೆ. ಆಕೆಯ ಮೇಲೆ ಎಫ್ಐಆರ್ ಆಗಿದ್ದು , ಪೊಲೀಸರು ವಿಚಾರಣೆಗೆ ಹೋಗಿದ್ದ ಸಂದರ್ಭದಲ್ಲಿ ಅವರನ್ನೇ ಕಚ್ಚಿದ್ದಾರೆ. ಹತ್ತು ಜನಕ್ಕೂ ಹೆಚ್ಚು ಮಹಿಳಾ ಪೊಲೀಸರಿದ್ದರು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಹಾಗೆ ಮಾಡಿದವರ ವಿರುದ್ಧ ಕಾನೂನಿನ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa