
ಬಳ್ಳಾರಿ, 08 ಜನವರಿ (ಹಿ.ಸ.) :
ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾದ್ಯಮ) ಶಾಲೆಗಳ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಗಳ ದಾಖಲಾತಿಗಾಗಿ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ವಿದ್ಯಾರ್ಥಿಗಳು ಮತ್ತು ಪಾಲಕರುಗಳು ಸೇವಾಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನವಾಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆ ಹೆಸರು :
ಕೊಳಗಲ್ಲಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಇ)ಯ ಪ್ರಾಂಶುಪಾಲರ ಮೊ.9844040035, ಬಳ್ಳಾರಿ ನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9844040035, ಸಂಡೂರಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9480933730, ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.7353346069, ಕುರುಗೋಡಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.7353346069, ಸಿರುಗುಪ್ಪದ ರಾರಾವಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.8861623814 ಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್